ADVERTISEMENT

ಅಥಣಿ ಶ್ರೀಗಳಿಗೆ ಪುಟ್ಟರಾಜ ಸಾಹಿತ್ಯ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2022, 16:11 IST
Last Updated 11 ಅಕ್ಟೋಬರ್ 2022, 16:11 IST
ಪ್ರಭು ಚನ್ನಬಸವ ಸ್ವಾಮೀಜಿ
ಪ್ರಭು ಚನ್ನಬಸವ ಸ್ವಾಮೀಜಿ   

ಅಥಣಿ: ಪಂಡಿತ ಪುಟ್ಟರಾಜ ಸೇವಾ ಸಮಿತಿ ನೀಡುವ ‘ಪಂಡಿತ ಪುಟ್ಟರಾಜ ಸಾಹಿತ್ಯ ಪುರಸ್ಕಾರ’ ರಾಷ್ಟ್ರೀಯ ಗೌರವ ಪ್ರಶಸ್ತಿಗೆ ಜಿಲ್ಲೆಯ ಅಥಣಿಯ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ ಅವರ ‘ಮಹಾತ್ಮರ ಚರಿತಾಮೃತ’ ಕೃತಿಯೂ ಆಯ್ಕೆಯಾಗಿದೆ.

ಸಮಿತಿಯು ಕಳೆದ 22 ವರ್ಷಗಳಿಂದ ಪುಟ್ಟರಾಜ ಗವಾಯಿಗಳ ಗೌರವಾರ್ಥ ಈ ಪ್ರಶಸ್ತಿ ನೀಡುತ್ತ ಬಂದಿದೆ. ಪಂ.ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿಗೆ ಬೆಂಗಳೂರಿನ ರೇಣುಕಾ ಕೋಡಗುಂಟಿ ಅವರ ‘ನಿಲುಗನ್ನಡಿ’ ಕಥಾ ಸಂಕಲನ ಆಯ್ಕೆಯಾಗಿದೆ. ಇದರೊಂದಿಗೆ ‘ವರ್ಷದ ಶೇಷ್ಠ ಕೃತಿ ರತ್ನ’ ಪ್ರಶಸ್ತಿಗೆ ರಾಜ್ಯ ಹಾಗೂ ಹೊರರಾಜ್ಯದ ಹಲವು ಲೇಖಕರ ಕೃತಿಗಳನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಗಳನ್ನು ಅ.30ರಂದು ದಾವಣಗೆರೆಯಲ್ಲಿ ಪ್ರದಾನ ಮಾಡಲಾಗುವುದು ಎಂದು ಸೇವಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಚನ್ನವೀರ ಸ್ವಾಮಿಗಳು ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.