ADVERTISEMENT

ಕಟ್ಟ ಕಡೆಯ ವ್ಯಕ್ತಿಗೂ ಗುಣಾತ್ಮಕ ಶಿಕ್ಷಣ ತಲುಪಲಿ: ಡಾ. ಅಲ್ಲಮಪ್ರಭು ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2020, 16:38 IST
Last Updated 20 ಜನವರಿ 2020, 16:38 IST
ಬೆಳಗಾವಿಯ ಸಿದ್ಧರಾಮೇಶ್ವರ ಇಂಗ್ಲಿಷ್‌ ಮಾಧ್ಯಮ ಪ್ರೌಢಶಾಲೆಯಲ್ಲಿ ಭಾನುವಾರ ನಡೆದ 2019–20ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನವನ್ನು ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಉದ್ಘಾಟಿಸಿದರು
ಬೆಳಗಾವಿಯ ಸಿದ್ಧರಾಮೇಶ್ವರ ಇಂಗ್ಲಿಷ್‌ ಮಾಧ್ಯಮ ಪ್ರೌಢಶಾಲೆಯಲ್ಲಿ ಭಾನುವಾರ ನಡೆದ 2019–20ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನವನ್ನು ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಉದ್ಘಾಟಿಸಿದರು   

ಬೆಳಗಾವಿ: ‘ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಗುಣಾತ್ಮಕ ಶಿಕ್ಷಣ ತಲುಪಬೇಕು’ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಆಶಿಸಿದರು.

ಇಲ್ಲಿನ ಶಿವಬಸವ ನಗರದ ಸಿದ್ಧರಾಮೇಶ್ವರ ಇಂಗ್ಲಿಷ್‌ ಮಾಧ್ಯಮ ಪ್ರೌಢಶಾಲೆಯಲ್ಲಿ ಭಾನುವಾರ ನಡೆದ 2019–20ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

‘ಮಾನವನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಸಮಾಜದ ಪ್ರಗತಿಯಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ದೇಶದ ಪ್ರಗತಿ ಶಿಕ್ಷಣ ಕ್ಷೇತ್ರದಲ್ಲಿನ ಉನ್ನತಿಯನ್ನು ಅವಲಂಭಿಸಿದೆ. ಹೀಗಾಗಿ, ಎಲ್ಲರಿಗೂ ಶಿಕ್ಷಣ ದೊರೆಯಬೇಕು. ಆಗ ಮಾತ್ರ ಸದೃಢ ಸಮಾಜ ನಿರ್ಮಿಸಲು ಸಾಧ್ಯವಿದೆ’ ಎಂದು ತಿಳಿಸಿದರು.

ADVERTISEMENT

ಆರ್‌ಟಿಒ ಶಿವಾನಂದ ಮಗದುಮ್ಮ ಮಾತನಾಡಿ, ‘ವ್ಯಕ್ತಿಯಲ್ಲಿ ನಯ, ವಿನಯ, ಮಾನವೀಯ ಮೌಲ್ಯಗಳು ಇಲ್ಲದಿದ್ದರೆ ಅಂತಹ ವಿದ್ಯೆ ನಿಷ್ಪ್ರಯೋಜಕ’ ಎಂದರು.

ವಿಜಯಪುರದ ಶಿಕ್ಷಣ ತಜ್ಞ ಪಾವನ ಕೃಷ್ಣಾರಾವ್ ಕುಲಕರ್ಣಿ ಮಾತನಾಡಿದರು. ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಎಂ.ಆರ್. ಉಳ್ಳೇಗಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಪ್ರೊ.ಬಿ.ಎಫ್. ಕಲ್ಲಣ್ಣವರ, ಎಸ್.ಎಸ್. ಸಂಯುಕ್ತ ಪಿಯು ಕಾಲೇಜಿನ ಉಪ ಪ್ರಾಚಾರ್ಯ ಕೆ.ಬಿ. ಹಿರೇಮಠ ಇದ್ದರು.

ದೈಹಿಕ ಶಿಕ್ಷಣ ಶಿಕ್ಷಕ ಶೀಧರ ನ್ಯಾಮಗೌಡ, ಗೀತಾ ತಿಪ್ಪಿಮಠ, ಸುನೀತಾ ಚೌಗಲಾ, ಉಪ ಪ್ರಾಚಾರ್ಯ ಮನೋಹರ ಉಳ್ಳೆಗಡ್ಡಿ ಸ್ವಾಗತಿಸಿ, ವಾರ್ಷಿಕ ವರದಿ ವಾಚಿಸಿದರು. ಸಿದ್ಧರಾಮೇಶ್ವರ ಇಂಗ್ಲಿಷ್‌ ಮಾಧ್ಯಮ ಪ್ರೌಢಶಾಲೆಯ ಪ್ರಾಚಾರ್ಯ ಪ್ರೇಮಾನಂದ ಜಾಧವ ಪ್ರಾಸ್ತಾವಿಕವಾಗಿ ಮಾತನಾಡಿದರು. ವೀಣಾ ನಾಸಿಪುಡಿ ಹಾಗೂ ರೋಹಿನಿ ಚಾಚಗೌಡ ನಿರೂಪಿಸಿದರು. ಮೀನಾಕ್ಷಿ ಯರಗಾವಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.