ಬೆಳಗಾವಿ: ‘ತಾಲ್ಲೂಕಿನ ಸಂತಿಬಸ್ತ ವಾಡ ಗ್ರಾಮದಲ್ಲಿ ಕುರಾನ್ ಹಾಗೂ ಹದೀಸ್ ಗಳನ್ನು ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಠಾಣೆಯ ಇನ್‌ಸ್ಪೆಕ್ಟರ್ ಮಂಜುನಾಥ ಹಿರೇಮಠ ಅವರನ್ನು ಅಮಾನತು ಮಾಡಲಾಗಿದೆ’ ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.
‘ಇದೇ ಗ್ರಾಮದಲ್ಲಿ ಏಪ್ರಿಲ್ 12ರಂದು ಕೂಡ ಈದ್ಗಾ ಮೈದಾನದ ಮೀನಾರ್‌ಗಳಿಗೆ ಧಕ್ಕೆ ಮಾಡಲಾಗಿತ್ತು. ಆ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಅದರಲ್ಲೂ ಇನ್‌ಸ್ಪೆಕ್ಟರ್ ಕರ್ತವ್ಯಲೋಪ ಕಂಡುಬಂದಿದ್ದರಿಂದ ಅಮಾನತು ಮಾಡಿದ್ದೇನೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.