ADVERTISEMENT

‘ಶಿವಸೇನಾ ಪುಂಡಾಟಿಕೆ ನಿಲ್ಲಿಸಲು ಕಠಿಣ ಕ್ರಮ’-ಆರ್. ಅಶೋಕ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2021, 19:42 IST
Last Updated 20 ಮಾರ್ಚ್ 2021, 19:42 IST
ಆರ್.ಅಶೋಕ
ಆರ್.ಅಶೋಕ   

ಬೆಳಗಾವಿ: ‘ರಾಜ್ಯದಲ್ಲಿ ಶಿವಸೇನಾದವರ ಪುಂಡಾಟಿಕೆ ನಿಲ್ಲಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.

ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಶಿವಸೇನಾ ದವರು ನಿರಂತರವಾಗಿ ಪುಂಡಾಟಿಕೆ ನಡೆಸುತ್ತಿರುವುದನ್ನು ಗಮನಿಸಿದ್ದೇವೆ. ಕಠಿಣ ಕ್ರಮದ ಮೂಲಕ ಅದನ್ನು ನಿಲ್ಲಿಸಲೇಬೇಕಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗೆ ಸೂಚನೆ ಕೊಡಲಾಗಿದೆ’ ಎಂದರು.

‘ಬೆಳಗಾವಿಯಲ್ಲಿ ಬಹಳ ಜನ ಮರಾಠಿ ಭಾಷಿಗರಿದ್ದು ಅವರು ಶಾಂತಿ ಬಯಸುತ್ತಾರೆ. ಕೆಲವರು ಪುಂಡಾಟ ಮಾಡುತ್ತಿದ್ದಾರೆ. ಅಂಥವರನ್ನು ಮಟ್ಟ ಹಾಕಿ ಸರಿಯಾದ ಪಾಠ ಕಲಿಸಲಾಗು ವುದು. ಆಗ ಮಾತ್ರ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.

ADVERTISEMENT

‘ಶಿವಸೇನಾ ಒಂದು ರಾಜಕೀಯ ಪಕ್ಷ. ಅದನ್ನು ನಿಷೇಧಿಸಲು ಕಾನೂನಿ ನಲ್ಲಿ ಅವಕಾಶ ಇದೆಯೋ, ಇಲ್ಲವೋ ಗೊತ್ತಿಲ್ಲ. ಈ ಬಗ್ಗೆ ಚರ್ಚಿಸಲಾಗುವುದು’ ಎಂದು ಅವರು ಪ್ರತಿಕ್ರಿಯಿಸಿದರು.

ಟಿಕೆಟ್– ಅಭಿ‍ಪ್ರಾಯ ತಿಳಿಸಿದ್ದೇನೆ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ವಿಷಯದಲ್ಲಿ ಚರ್ಚೆ ಯಾಗಿದೆ. ನಾನೂ ಆ ಸಮಿತಿಯಲ್ಲಿದ್ದು, ನನ್ನ ಅಭಿಪ್ರಾಯ ತಿಳಿಸಿದ್ದೇನೆ. ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಚರ್ಚಿಸಿದ್ದೇನೆ. ಯಾರಿಗೆ ಕೊಟ್ಟರೆ ಒಳ್ಳೆಯದು ಎನ್ನುವ ನಿಟ್ಟಿನಲ್ಲಿ ನನ್ನ ಅಭಿಪ್ರಾಯ ತಿಳಿಸಿದ್ದೇನೆ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ನೋಡೋಣ’ ಎಂದು ಅಶೋಕ ಅವರು ಹೇಳಿದರು.

* ಬೆಳಗಾವಿ ಸೇರಿದಂತೆ ಗಡಿ ರಕ್ಷಣೆ ವಿಷಯದಲ್ಲಿ ರಾಜಿ ಇಲ್ಲ. ನೆಲ, ಜಲ ಸಂರಕ್ಷಣೆಗೆ ಯಾವುದೇ ಬೆಲೆ ಬೇಕಾದರೂ ತೆರುವುದಕ್ಕೆ ನಮ್ಮ ಸರ್ಕಾರ ಸಿದ್ಧವಿದೆ.

-ಆರ್‌.ಅಶೋಕ್, ಕಂದಾಯ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.