ಬೆಳಗಾವಿ: ‘ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಆರ್. ಶಂಕರ್ ಅವರಿಗೆ ಟಿಕೆಟ್ ಸಿಗುತ್ತದೆ ಎನ್ನುವ ಸಂಪೂರ್ಣ ವಿಶ್ವಾಸವಿದೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಎಂ.ಟಿ.ಬಿ. ನಾಗರಾಜ್ ಹಾಗೂ ಎಚ್.ವಿಶ್ವನಾಥ್ ಅವರನ್ನೂ ಹೈಕಮಾಂಡ್ ಪರಿಗಣಿಸುತ್ತದೆ ಎನ್ನುವ ಆಶಾಭಾವವಿದೆ. ನಾನು, ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದ ನಾಯಕರ ಪರವಾಗಿದ್ದೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.