ADVERTISEMENT

ಅನಾರೋಗ್ಯದ ಕಾರಣ ಕಾಂಗ್ರೆಸ್‌ ಅಧಿವೇಶನಕ್ಕೆ ರಾಹುಲ್ ಗಾಂಧಿ ಗೈರು:CM ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 21 ಜನವರಿ 2025, 6:48 IST
Last Updated 21 ಜನವರಿ 2025, 6:48 IST
<div class="paragraphs"><p>ಕಾಂಗ್ರೆಸ್‌ ಅಧಿವೇಶನಕ್ಕೆ ಆಗಮಿಸಿದ ಪ್ರಿಯಾಂಕಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಸ್ವಾಗತಿಸಿ ಸಿಎಂ ಸಿದ್ದರಾಮಯ್ಯ</p></div>

ಕಾಂಗ್ರೆಸ್‌ ಅಧಿವೇಶನಕ್ಕೆ ಆಗಮಿಸಿದ ಪ್ರಿಯಾಂಕಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಸ್ವಾಗತಿಸಿ ಸಿಎಂ ಸಿದ್ದರಾಮಯ್ಯ

   

ಬೆಳಗಾವಿ: 'ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಅನಾರೋಗ್ಯ ಉಂಟಾದ ಕಾರಣ ಅವರು ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ರಾಹುಲ್ ಸಮಾವೇಶದಿಂದ ದೂರ' ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ? ಇದರಿಂದ ಏನು ಸಂದೇಶ ಹೋಗುತ್ತದೆ' ಎಂದೂ ಪ್ರಶ್ನಿಸಿದರು.

ADVERTISEMENT

'ಸಂಸದೆ ಪ್ರಿಯಾಂಕ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯಕಾರಿ ಸಮಿತಿ ಸದಸ್ಯರು, ಕಾರ್ಯದರ್ಶಿಗಳು ಆಗಮಿಸಲಿದ್ದು, ಸಂಭ್ರಮ ಇಮ್ಮಡಿಸಿದೆ' ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.