ಬೆಳಗಾವಿ: ತಾಲ್ಲೂಕಿನ ಭೂತರಾಮನಹಟ್ಟಿಯಲ್ಲಿ ಇರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಇರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ 63ನೇ ಜನ್ಮದಿನ ಪ್ರಯುಕ್ತ, ಅವರ ಪುತ್ರ ರಾಹುಲ್ ಜಾರಕಿಹೊಳಿ ಒಂದು ವರ್ಷದ ಅವಧಿಗೆ ದತ್ತು ಪಡೆದಿದ್ದಾರೆ.
‘ರಾಹುಲ್ ಜಾರಕಿಹೊಳಿ ಅವರು ₹2 ಲಕ್ಷ ಪಾವತಿಸಿ, 2025ರ ಜೂನ್ 1ರಿಂದ 2026ರ ಮೇ 31ರವರೆಗಿನ ಅವಧಿಗೆ ಸಿಂಹ ದತ್ತು ಪಡೆದಿದ್ದಾರೆ’ ಎಂದು ವಲಯ ಅರಣ್ಯಾಧಿಕಾರಿ ಪವನ ಕುರನಿಂಗ ‘ಪ್ರಜಾವಾಣಿ’ಗೆ ತಿಳಿಸಿದರು.
ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು, ಕಳೆದ ತಿಂಗಳು ಈ ಸಿಂಹವನ್ನು ಪ್ರವಾಸಿಗರ ವೀಕ್ಷಣೆಗಾಗಿ ಮುಕ್ತಗೊಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.