ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ: ‘ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಜಾರಕಿಹೊಳಿ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸಿದರೆ ಸ್ವಾಗತಿಸುತ್ತೇನೆ. ಅವರ ಗೆಲುವಿಗೆ ಶ್ರಮಿಸುತ್ತೇನೆ’ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಯಾವುದೇ ನಿರ್ಧಾರ ಕೈಗೊಳ್ಳಲು ಸ್ವತಂತ್ರರು. ಜಿಲ್ಲೆಯ ರೈತರ ಒಳಿತಿಗಾಗಿ ಈ ರೀತಿಯ ನಿರ್ಣಯ ತೆಗೆದುಕೊಳ್ಳಲಾಗಿದೆ. ಈಗ ಹಾಕಿದ ಶ್ರಮಕ್ಕೆ ಮುಂದೆ ಫಲ ಬರಲಿದೆ’ ಎಂದರು.
ಸುವರ್ಣ ವಿಧಾನಸೌಧದಲ್ಲಿ ಬಳಸಿದ ವಿದ್ಯುತ್‌ನ ₹1.10 ಕೋಟಿ ಬಿಲ್ ಉಳಿದ ಕಾರಣ, ಹೆಸ್ಕಾಂ ನೋಟಿಸ್ ನೀಡಿರುವ ಕುರಿತ ಪ್ರಶ್ನೆಗೆ, ‘ಲೋಕೋಪಯೋಗಿ ಇಲಾಖೆ ಮತ್ತು ಹೆಸ್ಕಾಂ ಎರಡೂ ಸರ್ಕಾರಿ ಇಲಾಖೆಗಳೇ. ಹಣಕಾಸು ಇಲಾಖೆ ಈ ಬಗ್ಗೆ ಪರಿಶೀಲಿಸಿ ಕ್ರಮ ವಹಿಸುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.