ADVERTISEMENT

ರಾಯಬಾಗ | ಅಭಿವೃದ್ದಿ ಕೆಲಸಗಳಿಂದ ಮತದಾರರ ಋಣ ತೀರಿಸುವೆ: ಪ್ರಿಯಾಂಕಾ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2025, 14:18 IST
Last Updated 10 ಏಪ್ರಿಲ್ 2025, 14:18 IST
ರಾಯಬಾಗ ತಾಲ್ಲೂಕಿನ ನಂದಿಕುರಳಿ ಗ್ರಾಮದ ಶ್ರೀ ಪಂಚಲಿಂಗೇಶ್ವರ ಮಠದ ಆವರಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿದರು
ರಾಯಬಾಗ ತಾಲ್ಲೂಕಿನ ನಂದಿಕುರಳಿ ಗ್ರಾಮದ ಶ್ರೀ ಪಂಚಲಿಂಗೇಶ್ವರ ಮಠದ ಆವರಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿದರು   

ರಾಯಬಾಗ: ‘ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಜನತೆ ಋಣವನ್ನು ಅಭಿವೃದ್ದಿ ಕಾರ್ಯಗಳ ಮೂಲಕ ತೀರಿಸುವ ಸಂಕಲ್ಪ ಮಾಡಿದ್ದೇನೆ’ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ರಾಯಬಾಗ ತಾಲ್ಲೂಕಿನ ಪುಣ್ಯಕ್ಷೇತ್ರ ನಂದಿಕುರಳಿ ಗ್ರಾಮದ ಪಂಚಲಿಂಗೇಶ್ವರ ಮಠದ ಆವರಣದಲ್ಲಿ ಆಯೋಜಿಸಿದ್ದ 38ನೇ ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು.

ಸತೀಶ ಜಾರಕಿಹೊಳಿ ಆಪ್ತ ಶಿವು ಪಾಟೀಲ ಮಾತನಾಡಿ, ಈ ಭಾಗದಲ್ಲಿ ನೀರಿನ ಸಮಸ್ಯೆಯಾಗದಂತೆ ಸಚಿವ ಸತೀಶ ಜಾರಕಿಹೊಳಿ ಅವರು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಯಬಾಗ ಮತ್ತು ಕುಡಚಿ ಮತಕ್ಷೇತ್ರದ ಎಲ್ಲ ಕೆರೆಗಳನ್ನು ತುಂಬಲು ಅವರು ಪಣತೊಟ್ಟಿದ್ದಾರೆ. ಹೀಗಾಗಿ ಈ ಭಾಗದ ರೈತರು ಯಾವುದೇ ಕಾರಣಕ್ಕೂ ಅಂಜುವಂತಿಲ್ಲ ಎಂದರು.

ADVERTISEMENT

ವೀರಭದ್ರ ಸ್ವಾಮೀಜಿ, ಕೆಪಿಸಿಸಿ ಸದಸ್ಯ ಅರ್ಜುನ ನಾಯಿಕವಾಡಿ, ಚಿಕ್ಕೋಡಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಿರ್ಮಲಾ ಪಾಟೀಲ, ಬಿಡಿಸಿಸಿ ಅಧ್ಯಕ್ಷ ಅಪ್ಪಾಸಾಬ ಕುಲಗುಡೆ, ದಿಲೀಪ ಜಮಾದಾರ, ಗಣೇಶ ಮೋಹಿತೆ,ಶ್ರವಣ ಕಾಂಬಳೆ, ಸಿದ್ದಲಿಂಗ ಹಿರೇಕುರಬರ,ಸುನೀಲ ಜಾಧವ, ಅಬ್ದುಲ್ ಸತಾರ ಮುಲ್ಲಾ,ಸುಭಾಷ ಕೋಟಿವಾಲೆ, ಅರ್ಜುನ ಬಂಡಗರ, ಕೇದಾರಿ ಮಾಳಿ, ಸಂತೋಷ ಸಾವಂತ, ತನುಜಾ ಶಿಂಗೆ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.