ADVERTISEMENT

7ನೇ ವೇತನ ಆಯೋಗ: ನಿವೃತ್ತ ಸರ್ಕಾರಿ ನೌಕರರಿಗೆ ಅನ್ಯಾಯ

ಕರ್ನಾಟಕ ನಿವೃತ್ತ ನೌಕರರ ವೇದಿಕೆ ಆರೋಪ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 14:33 IST
Last Updated 21 ಅಕ್ಟೋಬರ್ 2024, 14:33 IST
7ನೇ ವೇತನ ಆಯೋಗದಲ್ಲಿ ನಿವೃತ್ತ ಸರ್ಕಾರಿ ನೌಕರರಿಗೆ ಅನ್ಯಾಯವಾಗಿದ್ದು, ಅದನ್ನು ಸರಿಪಡಿಸುವಂತೆ ಒತ್ತಾಯಿಸಿ ರಾಯಬಾಗದ ನಿವೃತ್ತ ಸರ್ಕಾರಿ ನೌಕರರ ಸಂಘದ ವೇದಿಕೆ ಸದಸ್ಯರು ಶಾಸಕ ಡಿ.ಎಂ.ಐಹೊಳೆ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು
7ನೇ ವೇತನ ಆಯೋಗದಲ್ಲಿ ನಿವೃತ್ತ ಸರ್ಕಾರಿ ನೌಕರರಿಗೆ ಅನ್ಯಾಯವಾಗಿದ್ದು, ಅದನ್ನು ಸರಿಪಡಿಸುವಂತೆ ಒತ್ತಾಯಿಸಿ ರಾಯಬಾಗದ ನಿವೃತ್ತ ಸರ್ಕಾರಿ ನೌಕರರ ಸಂಘದ ವೇದಿಕೆ ಸದಸ್ಯರು ಶಾಸಕ ಡಿ.ಎಂ.ಐಹೊಳೆ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು   

ರಾಯಬಾಗ: ‘ರಾಜ್ಯ ಸರ್ಕಾರ ಜಾರಿಗೊಳಿಸಿರುವ 7ನೇ ವೇತನ ಆಯೋಗದಲ್ಲಿ ನಿವೃತ್ತ ಸರ್ಕಾರಿ ನೌಕರರಿಗೆ ಅನ್ಯಾಯವಾಗಿದ್ದು, ಪರಿಷ್ಕೃತ ವೇತನಕ್ಕೆ ಅನುಗುಣವಾಗಿ ನಿವೃತ್ತಿ ಉಪಧನ, ಪಿಂಚಣಿ ಮತ್ತು ಗಳಿಕೆ ರಜೆಯ ನಗದೀಕರಣದ ಸೌಲಭ್ಯಗಳಲ್ಲಿ ಅನ್ಯಾಯವಾಗಿದೆ’ ಎಂದು ಆರೋಪಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಪದಾಧಿಕಾರಿಗಳು ಆರೋಪಿಸಿದರು.

ಅನ್ಯಾಯ ಸರಿಪಡಿಸಲು ಒತ್ತಾಯಿಸಿ ಶಾಸಕ ಡಿ.ಎಂ.ಐಹೊಳೆ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಕರ್ನಾಟಕ ನಿವೃತ್ತ ನೌಕರ ಸಂಘದ ರಾಜ್ಯ ಸಂಚಾಲಕ ಚಂದ್ರಶೇಖರ ಅರಭಾವಿ ಮಾತನಾಡಿ, ‘7ನೇ ವೇತನ ಆಯೋಗದ ವರದಿ 2022ರ ಜುಲೈಗೆ ಅನ್ವಯವಾಗುವಂತೆ ಅಂಗೀಕರಿಸಬೇಕಿತ್ತು. ಆದರೆ ಸರ್ಕಾರ ಈ ಶಿಫಾರಸನ್ನು ಗಣನೆಗೆ ತೆಗೆದುಕೊಂಡಿಲ್ಲ.2022ರ ಜುಲೈನಿಂದ 2024ರ ಜುಲೈ ವರೆಗಿನ ಅವಧಿಯಲ್ಲಿ ನಿವೃತ್ತರಾದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 1,200 ನೌಕರರಿಗೆ ಅನ್ಯಾಯವಾಗಿದ್ದು, ಸರ್ಕಾರ ಕೂಡಲೇ ಸಮಸ್ಯೆಗೆ ಪರಿಹಾರ ನೀಡಬೇಕು’ ಎಂದು ಹೇಳಿದರು.

ADVERTISEMENT

ಶಾಸಕ ಡಿ.ಎಂ.ಐಹೊಳೆ ಮಾತನಾಡಿ, ‘ಮುಂಬರುವ ಸಚಿವ ಸಂಪುಟದಲ್ಲಿ ಪಕ್ಷಾತೀತವಾಗಿ ಈ ಸಮಸ್ಯೆ ಬಗ್ಗೆ ಧ್ವನಿ ಎತ್ತುವೆ’ ಎಂದರು.

ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಿ.ಎಸ್.ಡಿಗ್ರಜ, ತಾಲ್ಲುಕು ನಿವೃತ್ತ ನೌಕರರ ಸಂಘದ ಸಂಚಾಲಕ ಬಸವರಾಜ ಕುಂದರಗಿ, ಜೆ.ಎಸ್.ಜುಮ್ಮಾಯಿ, ಎಂ.ಆರ್.ಮಠದ, ಸಿ.ಎಂ.ಸಾಂಗ್ಲೆ, ಜೆ.ಆರ್.ದಿನಕರ, ಪಿ.ಎಂ.ಪಾಟೀಲ, ಎಸ್.ಟಿ.ಮಾಡಲಗಿ, ಎ.ಬಿ.ದೊಡಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.