ADVERTISEMENT

ಬೆಳಗಾವಿಯಲ್ಲಿ ರೈಲ್ವೆ ಸಹಾಯವಾಣಿ: ಅಂಗಡಿ

​ಪ್ರಜಾವಾಣಿ ವಾರ್ತೆ
Published 13 ಜೂನ್ 2019, 14:42 IST
Last Updated 13 ಜೂನ್ 2019, 14:42 IST
ಸುರೇಶ ಅಂಗಡಿ
ಸುರೇಶ ಅಂಗಡಿ   

ಬೆಳಗಾವಿ: ‘ರೈಲ್ವೆ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಮತ್ತು ಪರಿಹಾರ ಕಲ್ಪಿಸಲು ನಗರದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗುವುದು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.

ರೈಲು ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ರಾಜ್ಯದ ವಿವಿಧೆಡೆ ರೈಲುಗಳ ಆಗಮನ ವಿಳಂಬವಾಗುತ್ತಿದೆ. ಟಿಕೆಟ್ ಬುಕಿಂಗೆ ಸಂಬಂಧಿಸಿದಂತೆಯೂ ಸಮಸ್ಯೆ ಎದುರಿಸುತ್ತಿರುವುದಾಗಿ ಪ್ರಯಾಣಿಕರಿಂದ ದೂರುಗಳಿವೆ. ಅವರಿಗೆ ಸ್ಪಂದಿಸಲು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಸಹಾಯವಾಣಿಯನ್ನು ಕಾಡಾ ಕಚೇರಿಯಲ್ಲಿ ಶೀಘ್ರವೇ ಆರಂಭಿಸಲಾಗುವುದು. ಇದಕ್ಕಾಗಿ ವಿಶೇಷ ಅಧಿಕಾರಿಗಳನ್ನು ನೇಮಿಸಲಾಗುವುದು’ ಎಂದು ಮಾಹಿತಿ ನೀಡಿದರು.

ADVERTISEMENT

‘ರೈಲು ನಿಲ್ದಾಣಗಳಲ್ಲಿ ಸ್ವಚ್ಛತೆ, ಭದ್ರತೆಗೆ ಆದ್ಯತೆ ನೀಡಬೇಕು. ಪ್ರಯಾಣಿಕರಿಗೆ ಮೂಲಸೌಲಭ್ಯ ಒದಗಿಸಬೇಕು. ಜನಸ್ನೇಹಿಯಾಗಿ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.