ADVERTISEMENT

ಮಾರ್ಚ್‌ಗೆ ರೈಲು ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಸಚಿವ ಸುರೇಶ ಅಂಗಡಿ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2020, 16:04 IST
Last Updated 4 ಜೂನ್ 2020, 16:04 IST
ಬೆಳಗಾವಿಯ ರೈಲು ನಿಲ್ದಾಣ ನಿರ್ಮಾಣ ಕಾಮಗಾರಿ ಕುರಿತು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು
ಬೆಳಗಾವಿಯ ರೈಲು ನಿಲ್ದಾಣ ನಿರ್ಮಾಣ ಕಾಮಗಾರಿ ಕುರಿತು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು   

ಬೆಳಗಾವಿ: ‘ಇಲ್ಲಿನ ರೈಲು ನಿಲ್ದಾಣದ ನಿರ್ಮಾಣ ಕಾಮಗಾರಿಯನ್ನು ಸ್ಥಳೀಯ ಕಾರ್ಮಿಕರನ್ನು ಬಳಸಿಕೊಂಡು ಮುಂದಿನ ವರ್ಷದ ಮಾರ್ಚ್‌ಗೆ ಪೂರ್ಣಗೊಳಿಸಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಕಾಮಗಾರಿ ಪರಿಶೀಲಿಸಿದ ಅವರು, ‘ಈ ವರ್ಷದ ನವೆಂಬರ್‌ಗೆ ಪೂರ್ಣಗೊಳ್ಳಬೇಕಿತ್ತು. ಆದರೆ ಕೋವಿಡ್–19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT