ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಜಿಟಿಜಿಟಿ ಮಳೆ ಬುಧವಾರವೂ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ನಗರದಲ್ಲಿ ಬಹುತೇಕ ಮೋಡಕವಿದ ವಾತಾವರಣವಿತ್ತು. ಶೀತಗಾಳಿ ಬೀಸುತ್ತಿತ್ತು. ಎಂ.ಕೆ. ಹುಬ್ಬಳ್ಳಿ, ಹಿರೇಬಾಗೇವಾಡಿ, ಗೋಕಾಕ, ರಾಮದುರ್ಗ, ನಿಪ್ಪಾಣಿ, ಕಿತ್ತೂರು, ಹಾರೂಗೇರಿ ಪ್ರದೇಶದಲ್ಲಿ ಮಳೆ ಬಿದ್ದಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.