ADVERTISEMENT

ಮಳೆ: ರಸ್ತೆ ಮೇಲೆ ಹರಿದ ಚರಂಡಿ ನೀರು

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2024, 13:18 IST
Last Updated 23 ಸೆಪ್ಟೆಂಬರ್ 2024, 13:18 IST
ರಾಮದುರ್ಗದಲ್ಲಿ ಸುರಿದ ಮಳೆಯಿಂದಾಗಿ ಚರಂಡಿ ನೀರು ಮುಖ್ಯ ರಸ್ತೆಯ ಮೇಲೆ ಹರಿಯಿತು
ರಾಮದುರ್ಗದಲ್ಲಿ ಸುರಿದ ಮಳೆಯಿಂದಾಗಿ ಚರಂಡಿ ನೀರು ಮುಖ್ಯ ರಸ್ತೆಯ ಮೇಲೆ ಹರಿಯಿತು   

ರಾಮದುರ್ಗ: ಪಟ್ಟಣದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಸುಮಾರು 30 ನಿಮಿಷಗಳ ಕಾಲ ಗುಡುಗು ಸಹಿತ ಭಾರೀ ಮಳೆ ಸುರಿಯಿತು.

ರಭಸದಿಂದ ಸುರಿದ ಮಳೆಯಿಂದಾಗಿ ಪಟ್ಟಣದ ಇಕ್ಕೆಲಗಳಲ್ಲಿ ನೀರು ಹರಿದು ಸ್ವಚ್ಛಗೊಂಡಿತು. ರಸ್ತೆ, ಚರಂಡಿಗಳಲ್ಲಿ ನೀರು ತುಂಬಿ ಹರಿದು ಕೆಲಕಾಲ ರಸ್ತೆ ಸಂಚಾರ ನಿಂತಿತ್ತು.

ಪಟ್ಟಣದಲ್ಲಿ ಹಾಯ್ದು ಹೋಗಿರುವ ಕೆಶಿಫ್‌ ರಸ್ತೆ ಮಗ್ಗುಲಿಗೆ ಅವೈಜ್ಞಾನಿಕವಾಗಿ ನಿರ್ಮಿಸಿದ ಚರಂಡಿಗಳಲ್ಲಿ ಹೂಳು ತುಂಬಿಕೊಂಡು ರಸ್ತೆಯನ್ನೆಲ್ಲ ಆವರಿಸಿತ್ತು. ಪಕ್ಕದ ಅಂಬೇಡ್ಕರ್‌ ಕಾಲೊನಿಯಲ್ಲಿಯೂ ನೀರು ಹರಿದು ಅವಾಂತರ ಸೃಷ್ಟಿಸಿತು.

ಮಳೆಯಾದಾಗೊಮ್ಮೆ ಚರಂಡಿ ನೀರು ಅಂಬೇಡ್ರ್‌ ನಗರದ ಮನೆಗಳಿಗೆ ನುಗ್ಗುತ್ತಿದೆ ಎಂದು ಅಲ್ಲಿನವರು ಕೇಳಿಕೊಂಡರೂ ಪುರಸಭೆ ಮತ್ತು ಲೋಕೋಪಯೋಗಿ ಇಲಾಖೆ ಸ್ಪಂದಿಸುತ್ತಿಲ್ಲ. ಪರಿಶಿಷ್ಟರಾದ ತಮಗೆ ಮತ್ತೆ ಕೊಳಚೆಯಲ್ಲಿ ಇರುವಂತೆ ಅಧಿಕಾರಿಗಳು ವರ್ತಿಸುತ್ತಿದ್ದಾರೆ ಎಂದು ಕಾಲೊನಿಯ ಜನ ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.