ಬೆಳಗಾವಿ: ಜಿಲ್ಲೆಯ ವಿವಿಧೆಡೆ ಮಂಗಳವಾರ ಬಿಡುವು ನೀಡಿದೆ.
ದಕ್ಷಿಣ ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದ್ದು, ಅಲ್ಲಿಂದ ಅಪಾರ ಪ್ರಮಾಣದ ನೀರು ಕೃಷ್ಣಾ ಹಾಗೂ ಉಪನದಿಗಳಾದ ದೂಧ್ ಗಂಗಾ, ವೇದ ಗಂಗಾಗೆ ಹರಿದು ಬರುತ್ತಿದೆ.
ಆ ರಾಜ್ಯದ ರಾಜಾಪುರ ಬ್ಯಾರೇಜ್ ಮೂಲಕ 61,310 ಕ್ಯುಸೆಕ್ ನೀರು ಕೃಷ್ಣಾಗೆ ಸೇರಿಕೊಳ್ಳುತ್ತಿದೆ.
ಜಲಾವೃತವಾಗಿರುವ ಚಿಕ್ಕೋಡಿ ತಾಲ್ಲೂಕಿನ 6, ಖಾನಾಪುರದ 1 ಹಾಗೂ ಬೈಲಹೊಂಗಲದ 1 ಸೇತುವೆ ಯಥಾಸ್ಥಿತಿಯಲ್ಲಿವೆ. ಗೋಕಾಕದ ಬ್ರಿಡ್ಜ್ ಕಮ್ ಬ್ಯಾರೇಜ್ ಕೂಡ ನೀರಿನಲ್ಲಿ ಮುಳುಗಡೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.