ADVERTISEMENT

ಚಿಕ್ಕೋಡಿ: ಮಳೆಗೆ ಎರಡು ಸೇತುವೆ ಜಲಾವೃತ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2025, 2:50 IST
Last Updated 18 ಆಗಸ್ಟ್ 2025, 2:50 IST
ಚಿಕ್ಕೋಡಿ ತಾಲ್ಲೂಕಿನ ಮಲಿಕವಾಡ ಬಳಿ ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ ಬ್ಯಾರೇಜ್ ಮಹಾ ಮಳೆಯಿಂದ ಜಲಾವೃತಗೊಂಡಿದೆ 
ಚಿಕ್ಕೋಡಿ ತಾಲ್ಲೂಕಿನ ಮಲಿಕವಾಡ ಬಳಿ ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ ಬ್ಯಾರೇಜ್ ಮಹಾ ಮಳೆಯಿಂದ ಜಲಾವೃತಗೊಂಡಿದೆ    

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಳವಾಗಿದ್ದರಿಂದ ಚಿಕ್ಕೋಡಿ ಉಪ ವಿಭಾಗದಲ್ಲಿ ಕೃಷ್ಣಾ ಹಾಗೂ ಉಪನದಿಗಳ ನೀರಿನ ಹರಿವು ಪ್ರಮಾಣ ಭಾನುವಾರ ಹೆಚ್ಚಳವಾಗಿದೆ.

ತಾಲ್ಲೂಕಿನ ಕೃಷ್ಣಾ ನದಿಯ ಕಲ್ಲೋಳ-ಯಡೂರ ಸೇತುವೆ, ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ ಸೇತುವೆ ಜಲಾವೃತಗೊಂಡಿದ್ದರಿಂದ ಸಂಚಾರ ಸ್ಥಗಿತಗೊಂಡಿದೆ.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಜಾಪೂರೆ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ 49 ಸಾವಿರ  ಕ್ಯೂಸೆಕ್ ಹೊರ ಹರಿವು ಇದ್ದು, ಸದಲಗಾ ಪಟ್ಟಣದ ಬಳಿಯಲ್ಲಿ ದೂಧಗಂಗಾ ನದಿಗೆ 11968 ಕ್ಯೂಸೆಕ್ ಹೊರ ಹರಿವು ಇದೆ. ತಾಲ್ಲೂಕಿನ ಕಲ್ಲೋಳ-ಯಡೂರ ಸೇತುವೆ ಬಳಿಯಲ್ಲಿ 60,968 ಕ್ಯೂಸೆಕ್ ಹೊರ ಹರಿವು ಇದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.