ADVERTISEMENT

ಬೆಳಗಾವಿಯಲ್ಲಿ ಮಳೆ; ಮತ್ತೆರಡು ಸೇತುವೆ ಜಲಾವೃತ

​ಪ್ರಜಾವಾಣಿ ವಾರ್ತೆ
Published 8 ಜುಲೈ 2019, 12:51 IST
Last Updated 8 ಜುಲೈ 2019, 12:51 IST

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನ ಅರಣ್ಯ ಪ್ರದೇಶಗಳಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು, ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ.

ಖಾನಾಪುರ ತಾಲ್ಲೂಕಿನ ತಿವೋಲಿ ಗ್ರಾಮದ ಸಂಪರ್ಕ ಸೇತುವೆ, ಬೈಲಹೊಂಗಲ ತಾಲ್ಲೂಕಿನ ಬೇವಿನಕೊಪ್ಪ– ಸಂಗೊಳ್ಳಿ ಕಿರು ಸೇತುವೆ ಜಲಾವೃತವಾಗಿವೆ. ಇವುಗಳಿಗೆ ಪರ್ಯಾಯ ರಸ್ತೆಗಳಿದ್ದು, ಜನರ ಓಡಾಟಕ್ಕೆ ತೊಂದರೆಯಾಗಿಲ್ಲ.

ಬೆಳಗಾವಿ, ಬೈಲಹೊಂಗಲ, ಚನ್ನಮ್ಮನ ಕಿತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ.

ADVERTISEMENT

ರಾಜ್ಯಕ್ಕೆ ಹರಿದುಬರುತ್ತಿರುವ ನೀರು:

ದಕ್ಷಿಣ ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದೆ. ಮಹಾಬಳೇಶ್ವರ, ಪಾಟಗಾಂವ, ಕೊಯ್ನಾ, ವಾರಣಾ, ಕಾಳಮ್ಮವಾಡಿ, ರಾಧಾನಗರಿ ಹಾಗೂ ನವಜಾ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ. ಈ ನೀರು ಕೃಷ್ಣಾ ಹಾಗೂ ಉಪನದಿಗಳಾದ ದೂಧ್‌ಗಂಗಾ, ವೇದಗಂಗಾ ಮೂಲಕ ರಾಜ್ಯಕ್ಕೆ ನೀರು ಹರಿದುಬರುತ್ತಿದೆ. ರಾಜಾಪುರ ಬ್ಯಾರೇಜ್‌ ಮೂಲಕ 59,653 ಕ್ಯುಸೆಕ್‌ ನೀರು ಕೃಷ್ಣಾ ನದಿಗೆ ಸೇರಿಕೊಂಡಿದೆ.

3– 4 ದಿನಗಳ ಹಿಂದೆ ಜಲಾವೃತಗೊಂಡಿದ್ದ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ– ಯಡೂರ, ಕಾರದಗಾ– ಭೋಜ, ಭೋಜವಾಡಿ– ಕುನ್ನೂರ, ಸಿದ್ನಾಳ– ಅಕ್ಕೋಳ, ಜತ್ರಾಟ– ಭಿವಶಿ ಹಾಗೂ ಮಲಿಕವಾಡ– ದತ್ತವಾಡ ಸೇತುವೆಗಳು ಯಥಾಸ್ಥಿತಿಯಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.