ಚಿಕ್ಕೋಡಿ ತಾಲ್ಲೂಕಿನ ಮಲಿಕವಾಡ ಬಳಿ ದೂಧಗಂಗಾ ನದಿಯ ಮಲಿಕವಾಡ– ದತ್ತವಾಡ ಸೇತುವೆ ಸೋಮವಾರ ಸಂಚಾರಕ್ಕೆ ಮುಕ್ತವಾಯಿತು
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದೆ. ಚಿಕ್ಕೋಡಿ ತಾಲ್ಲೂಕಿನ ದೂಧಗಂಗಾ ನದಿಯ ಮಲಿಕವಾಡ– ದತ್ತವಾಡ ಹಾಗೂ ಕೃಷ್ಣಾ ನದಿಯ ಕಲ್ಲೋಳ– ಯಡೂರ ಸೇತುವೆಗಳು ಸೋಮವಾರ ಸಂಚಾರಕ್ಕೆ ಮುಕ್ತವಾಗಿವೆ.
ಮಹಾರಾಷ್ಟ್ರದ ರಾಜಾಪೂರೆ ಬ್ಯಾರೇಜಿನಿಂದ 44,750 ಕ್ಯೂಸೆಕ್ ಹೊರ ಹರಿವು ಇದ್ದು, ಸದಲಗಾ ಪಟ್ಟಣದ ಬಳಿಯಲ್ಲಿ ದೂಧಗಂಗಾ ನದಿಗೆ 11,616 ಕ್ಯೂಸೆಕ್ ಹೊರ ಹರಿವು ಇದೆ. ತಾಲ್ಲೂಕಿನ ಕಲ್ಲೋಳ– ಯಡೂರ ಬ್ಯಾರೇಜ್ ಬಳಿಯಲ್ಲಿ ಕೃಷ್ಣಾ ನದಿಯ ಹೊರ ಹರಿವು 56,366 ಕ್ಯೂಸೆಕ್ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.