ADVERTISEMENT

ಬೆಳಗಾವಿಯ ಈಜುಪಟು ರಾಘವೇಂದ್ರ ಅಣ್ವೇಕರ್‌ಗೆ ರಾಜ್ಯೋತ್ಸವ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2022, 19:34 IST
Last Updated 30 ಅಕ್ಟೋಬರ್ 2022, 19:34 IST
ರಾಘವೇಂದ್ರ ಅಣ್ವೇಕರ್
ರಾಘವೇಂದ್ರ ಅಣ್ವೇಕರ್   

ಬೆಳಗಾವಿ: ಇಲ್ಲಿನ ಸಹ್ಯಾದ್ರಿ ನಗರದ ನಿವಾಸಿ, ಅಂಗವಿಕಲ ಈಜುಪಟು ರಾಘವೇಂದ್ರ ರತ್ನಾಕರ ಅಣ್ವೇಕರ್‌(35) ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅವರು ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವರು. ಎಂ.ಎ(ರಾಜ್ಯಶಾಸ್ತ್ರ) ಸ್ನಾತಕೋತ್ತರ ಪದವಿ ಗಳಿಸಿದ್ದಾರೆ. 2014ರಿಂದ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದಾರೆ. 14ನೇ ವಯಸ್ಸಿನಿಂದ ಈಜು ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿರುವ ಅವರು, ಹಾಂಕಾಂಗ್‌, ಮಲೇಷ್ಯಾ, ಡೆನ್ಮಾರ್ಕ್‌ ಮತ್ತಿತರ ದೇಶಗಳಲ್ಲಿ ನಡೆದ ಅಂತರರಾಷ್ಟ್ರೀಯ ಈಜು ಟೂರ್ನಿಗಳಲ್ಲಿ 28, ರಾಷ್ಟ್ರಮಟ್ಟದ ಟೂರ್ನಿಗಳಲ್ಲಿ 100 ಪದಕಗಳನ್ನು ಗಳಿಸಿದ್ದಾರೆ.

2010ರಲ್ಲಿ ಚೀನಾದಲ್ಲಿ ನಡೆದ ಏಷ್ಯನ್‌ ಗೇಮ್ಸ್‌ನ 200 ಮೀ. ವೈಯಕ್ತಿಕ ಮೆಡ್ಲೆ ವಿಭಾಗದಲ್ಲಿ ಕಂಚಿನ ಪದಕ ಗಳಿಸಿದ್ದಾರೆ. 2014ರಲ್ಲಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರಿಂದ ರಾಷ್ಟ್ರಪ್ರಶಸ್ತಿ ಪಡೆದುಕೊಂಡಿದ್ದಾರೆ.

ADVERTISEMENT

‘ಅಂಗವೈಕಲ್ಯದ ಮಧ್ಯೆಯೂ ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆ ಗುರುತಿಸಿ, ಸರ್ಕಾರ ಪ್ರಶಸ್ತಿ ನೀಡುತ್ತಿರುವುದು ಸಂತಸ ತಂದಿದೆ. ಸತತ ಪರಿಶ್ರಮಕ್ಕೆ ಫಲ ದೊರೆತಿದೆ’ ಎಂದು ರಾಘವೇಂದ್ರ ಅಣ್ವೇಕರ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.