ಅಶೋಕ ಪಟ್ಟಣ
ಬೆಳಗಾವಿ: ‘ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸೋತರೆ, ಮುಂದೆ ಸಂಪುಟಕ್ಕೆ ಸೇರುವ ಸಾಧ್ಯತೆಗೆ ತೊಂದರೆ ಆಗಬಹುದು. ಹಾಗಾಗಿ ಈ ಚುನಾವಣೆಯಲ್ಲಿ ರಾಮದುರ್ಗ ಕ್ಷೇತ್ರದಿಂದ ಸಲ್ಲಿಸಿದ್ದ ನಾಮಪತ್ರ ಹಿಂದಕ್ಕೆ ಪಡೆದಿದ್ದೇನೆ’ ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.
‘ನಾನು ಸಚಿವ ಸ್ಥಾನದ ಆಕಾಂಕ್ಷಿ. ಶೀಘ್ರ ನಡೆಯಲಿರುವ ಸಂಪುಟ ವಿಸ್ತರಣೆ ವೇಳೆ, ಅದು ಸಚಿವ ಸ್ಥಾನ ಸಿಗುವ ಭರವಸೆ ಹೊಂದಿದ್ದೇನೆ. ಹಾಗಾಗಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಪಾಯ ಎದುರಿಸಲು ಬಯಸಲಿಲ್ಲ’ ಎಂದ ಸುದ್ದಿಗಾರರಿಗೆ ತಿಳಿಸಿದರು.
‘ನಾಮಪತ್ರ ಹಿಂದಕ್ಕೆ ನಿರ್ಧಾರ ವೈಯಕ್ತಿಕ. ಯಾರ ಒತ್ತಡಕ್ಕೂ ಮಣಿದಿಲ್ಲ. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಇಂದು ಬೆಳಿಗ್ಗೆ ಭೇಟಿಯಾಗಿದ್ದೆ. ಆದರೆ, ಡಿಸಿಸಿ ಬ್ಯಾಂಕ್ ಚುನಾವಣೆ ವಿಷಯದ ಬಗ್ಗೆ ಚರ್ಚಿಸಲಾಗಿಲ್ಲ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.