ADVERTISEMENT

ಕಾಂಗ್ರೆಸ್‌ ಪರ ರಮೇಶ ಜಾರಕಿಹೊಳಿ ಪ್ರಚಾರ: ಪ್ರಕಾಶ ಹುಕ್ಕೇರಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2019, 14:34 IST
Last Updated 23 ಏಪ್ರಿಲ್ 2019, 14:34 IST
ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಮತದಾನ ಮಾಡಿದರು
ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಮತದಾನ ಮಾಡಿದರು   

ಚಿಕ್ಕೋಡಿ: ‘ಶಾಸಕ ರಮೇಶ ಜಾರಕಿಹೊಳಿ ಜೊತೆ ಒಳ್ಳೆಯ ಸಂಬಂಧವಿದೆ. ನಮ್ಮಿಬ್ಬರ ಮಧ್ಯೆ ಯಾವುದೇ ರೀತಿಯ ವೈಮನಸ್ಸು ಇಲ್ಲ. ಈ ಚುನಾವಣೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಅವರು ಕಾಂಗ್ರೆಸ್‌ ಪರವಾಗಿಯೇ ಪ್ರಚಾರ ಮಾಡಿದ್ದಾರೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಹೇಳಿದರು.

ತಾಲ್ಲೂಕಿನ ಯಕ್ಸಂಬಾದಲ್ಲಿ ಮಂಗಳವಾರ ಮತ ಚಲಾಯಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಅವರು ಕಾಂಗ್ರೆಸ್‌ ತೊರೆಯುವ ಕುರಿತು ಎಲ್ಲೂ ಹೇಳಿಲ್ಲ. ಇದು ಕೇವಲ ಮಾಧ್ಯಮದ ಸೃಷ್ಟಿಯಾಗಿದೆ. ಅವರ ನಡೆ ಕುರಿತು ಪಕ್ಷದ ಹೈಕಮಾಂಡ್‌ ನಿರ್ಧಾರ ಕೈಗೊಳ್ಳಲಿದೆ. ಅವರು ಪಕ್ಷದಲ್ಲೇ ಇದ್ದರೆ ಬೆಂಬಲ ದೊರೆಯುತ್ತದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.