ADVERTISEMENT

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರಮೇಶ ಜಾರಕಿಹೊಳಿ ಬೆಂಬಲಿಗ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 9:40 IST
Last Updated 3 ಮಾರ್ಚ್ 2021, 9:40 IST
ಗೋಕಾಕದಲ್ಲಿ ರಮೇಶ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ 
ಗೋಕಾಕದಲ್ಲಿ ರಮೇಶ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ    

ಬೆಳಗಾವಿ: ರಮೇಶ ಜಾರಕಿಹೊಳಿ ಅವರ ರಾಜೀನಾಮೆ ಅಂಗಿಕರಿಸಿದಂತೆ ಆಗ್ರಹಿಸಿ ಗೋಕಾಕ ನಗರದಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಅಂಗೀಕರಿಸಿದಲ್ಲಿ ಬೆಳಗಾವಿ ಜಿಲ್ಲೆ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಗೋಕಾಕದ ಬಸವೇಶ್ವರ ವೃತ್ತದಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದರು.

ADVERTISEMENT

ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣದಿಂದ ನೈತಿಕ ಹೊಣೆ ಹೊತ್ತು ರಾಜಿನಾಮೆ ಸಲ್ಲಿಸಿದ್ದಾರೆಯೇ ವಿನಃ ಅವರು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ರಾಜೀನಾಮೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಈ ನಡುವೆ ರಮೇಶ ಬೆಂಬಲಿಗನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೂ ನಡೆದಿದೆ. ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗೋಕಾಕದಲ್ಲಿ ರಮೇಶ ಬೆಂಬಲಿಗರು ಕೆಲವು ಅಂಗಡಿಗಳನ್ನು ಮುಚ್ಚಿಸಿದ್ದಾರೆ. ಕೆಲವರು ಸ್ವಯಂಪ್ರೇರಿತವಾಗಿ ಬಾಗಿಲು ಹಾಕಿಕೊಂಡು ತೆರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.