ADVERTISEMENT

ಕೋವಿಡ್ ಸೋಂಕು: ರಮೇಶ ಜಾರಕಿಹೊಳಿ ಆಸ್ಪತ್ರೆಯಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 6:21 IST
Last Updated 7 ಏಪ್ರಿಲ್ 2021, 6:21 IST
ಶಾಸಕ ರಮೇಶ ಜಾರಕಿಹೊಳಿ
ಶಾಸಕ ರಮೇಶ ಜಾರಕಿಹೊಳಿ   

ಬೆಳಗಾವಿ: ಕೋವಿಡ್- 19ನಿಂದಾಗಿ ಗೋಕಾಕದ ತಾಲ್ಲೂಕು ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಬುಧವಾರ ಬೆಳಿಗ್ಗೆ ಬಿಡುಗಡೆ ಮಾಡಲಾಯಿತು.

ಏ. 4ರಂದು ರಾತ್ರಿ 10.30ಕ್ಕೆ ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಏ. 1ರಂದು ಅವರಿಗೆ ಕೋವಿಡ್ ದೃಢಪಟ್ಟಿತ್ತು. ಬಿಪಿ, ಶುಗರ್ ಪ್ರಮಾಣ ಜಾಸ್ತಿಯಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ADVERTISEMENT

ಬಿಪಿ, ಶುಗರ್ ಕಂಟ್ರೋಲ್ ಬಂದಿದ್ದರಿಂದ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಆಸ್ಪತ್ರೆಯಿಂದ ನೇರವಾಗಿ ಮನೆಗೆ ತೆರಳಿದರು. ಮನೆಯಲ್ಲಿ ಕ್ವಾರೆಂಟೈನ್ ಆಗುವಂತೆ ತಿಳಿಸಲಾಗಿದೆ ಎಂದು ವೈದ್ಯರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.