ADVERTISEMENT

ಜಾತ್ರೆ ಯಶಸ್ಸಿಗೆ ಎಲ್ಲರೂ ಸಹಕರಿಸಿ: ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 30 ಮೇ 2025, 15:52 IST
Last Updated 30 ಮೇ 2025, 15:52 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ   

ಗೋಕಾಕ: ಗ್ರಾಮ ದೇವತೆಯರ ಜಾತ್ರೆಗೆ ನಗರಸಭೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಎಲ್ಲ ರೀತಿಯ ಪೂರ್ವ ಸಿದ್ಧತೆಯೊಂದಿಗೆ ಜಾತ್ರೆಗೆ ಬರುವ ಜನತೆಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸುವಂತೆ ಜಾತ್ರಾ ಕಮಿಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಹೇಳಿದರು.

ಗುರುವಾರ ಕರೆದಿದ್ದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

10 ವರ್ಷಗಳ ನಂತರ ನಡೆಯುತ್ತಿರುವ ಈ ಜಾತ್ರೆ ವಿಶೇಷಯತೆಯಿಂದ ಕೂಡಿದೆ. ದೇವತೆಯರ ಗುಡಿಗಳು ನವೀಕರಣಗೊಂಡು ಹೆಚ್ಚು ಆಕಷರ್ಣೆಯಿಂದ ಕಂಗೊಳಿಸುತ್ತಿವೆ. ಜನತೆಯು ಈ ಬಾರಿಯ ಜಾತ್ರೆಯನ್ನು ಅದ್ಧೂರಿಯಾಗಿ ಆಚರಿಸುವ ಉತ್ಸುಕತೆಯಲ್ಲಿದ್ದಾರೆ. ಇಲಾಖೆಗಳು ಹೆಚ್ಚಿನ ಸೌಲಭ್ಯಗಳನ್ನು ಜನತೆಗೆ ತಲುಪಿಸಿ ಅವರ ಉತ್ಸುಕತೆಯನ್ನು ಇಮ್ಮಡಿಗೊಳಿಸಲಿ. ರಥೋತ್ಸವ ಮುಗಿದ ನಂತರ ಭಂಡಾರ ಆಡುವಂತಿಲ್ಲ. ಭಂಡಾರದಲ್ಲಿ ರಾಸಾಯನಿಕ ಮಿಶ್ರಣವಾದರೆ ಅಂಗಡಿಕಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ADVERTISEMENT

ಸಭೆಯಲ್ಲಿ ತಹಶೀಲ್ದಾರ್‌ ಡಾ.ಮೋಹನ ಭಸ್ಮೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಘಸ್ತೆ, ನಗರಸಭೆ ಪೌರಾಯುಕ್ತ ರಮೇಶ ಜಾಧವ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.