ADVERTISEMENT

ಕೋವಿಡ್-19 ನಿಧಿಗೆ ₹.8,29,551 ನೀಡಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಬ್ಬಂದಿ

​ಪ್ರಜಾವಾಣಿ ವಾರ್ತೆ
Published 2 ಮೇ 2020, 10:04 IST
Last Updated 2 ಮೇ 2020, 10:04 IST
ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಡಿಡಿ ಹಸ್ತಾಂತರಿಸಿದ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಬ್ಬಂದಿ
ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಡಿಡಿ ಹಸ್ತಾಂತರಿಸಿದ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಬ್ಬಂದಿ   

ಬೆಳಗಾವಿ: ಕೋವಿಡ್-19 ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಒಂದು ದಿನದ ವೇತನದ ಮೊತ್ತ ₹.8,29,551 ಗಳನ್ನು ನೀಡಿದ್ದಾರೆ.

ಡಿ.ಡಿ.ಯನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ರಾಮಚಂದ್ರ ಗೌಡ ಅವರು ಮುಖ್ಯಮಂತ್ರಿಯವರಿಗೆ ಹಸ್ಥಾಂತರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಹಾಗೂ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ. ಎ. ಜಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT