
ಪ್ರಜಾವಾಣಿ ವಾರ್ತೆ
ಕೃಷ್ಣಮೃಗ (ಪ್ರಾತಿನಿಧಿಕ ಚಿತ್ರ)
ಬೆಳಗಾವಿ: ‘ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಸೋಂಕು ಪೀಡಿತ ಏಳು ಕೃಷ್ಣಮೃಗಗಳ ಆರೋಗ್ಯ ಸ್ಥಿರವಾಗಿದ್ದು, ನಾಲ್ಕು ದಿನಗಳಿಂದ ತೀವ್ರ ನಿಗಾ ಇಡಲಾಗಿದೆ’ ಎಂದು ಮೃಗಾಲಯದ ಅಧಿಕಾರಿಗಳು ಮಂಗಳವಾರ ತಿಳಿಸಿದರು.
‘ಗಳಲೆ ರೋಗದಿಂದ 31 ಕೃಷ್ಣಮೃಗಗಳು ಮೃತಪಟ್ಟಿವೆ. ಬೆಂಗಳೂರಿನಿಂದ ಬಂದಿರುವ ಡಾ. ಪ್ರಯಾಗ್ ನೇತೃತ್ವದ ತಂಡ ಇನ್ನೂ ಆರು ದಿನ ಚಿಕಿತ್ಸೆ ನೀಡುಲಿದೆ’ ಎಂದು ಎಂದು ಮೃಗಾಲಯದ ವಲಯ ಅರಣ್ಯಾಧಿಕಾರಿ ಪವನ್ ಕುರನಿಂಗ ‘ಪ್ರಜಾವಾಣಿ’ಗೆ ತಿಳಿಸಿದರು.
‘ಒಟ್ಟು 26 ಮಂದಿ ಪ್ರಾಣಿಗಳ ಮೇಲೆ ನಿಗಾ ವಹಿಸಿದ್ದೇವೆ. ಮೃಗಾಲಯಕ್ಕೆ ಬರುವ ಪ್ರವಾಸಿಗರಿಗೂ ಅಡಚಣೆಯಾಗದಂತೆ ಕಾಳಜಿ ವಹಿಸಿಸಲಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.