ADVERTISEMENT

ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಹಾಲಿನ ಪುಡಿ ವಶ

​ಪ್ರಜಾವಾಣಿ ವಾರ್ತೆ
Published 7 ಜೂನ್ 2020, 13:53 IST
Last Updated 7 ಜೂನ್ 2020, 13:53 IST
ಬೆಳಗಾವಿಯಲ್ಲಿ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ ವಶಪಡಿಸಿಕೊಂಡಿದ್ದಾರೆ
ಬೆಳಗಾವಿಯಲ್ಲಿ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ ವಶಪಡಿಸಿಕೊಂಡಿದ್ದಾರೆ   

ಬೆಳಗಾವಿ: ಇಲ್ಲಿನ ಧಾಮನೆ ರಸ್ತೆಯ ನಿಜಾಮಿಯಾ ನಗರದ ಟಿಪ್ಪು ಸುಲ್ತಾನ್ ಕಾಲೊನಿಯ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ‘ಅನ್ನಭಾಗ್ಯ’ ಯೋಜನೆಯ 13 ಕ್ವಿಂಟಲ್ ಅಕ್ಕಿ ಹಾಗೂ ‘ಕ್ಷೀರಭಾಗ್ಯ’ ಯೋಜನೆಯ 85 ಕೆ.ಜಿ. ಹಾಲಿನ ಪುಡಿಯ ಪಾಕೆಟ್‌ಗಳನ್ನು ಪೊಲೀಸರು ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ಶನಿವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.

ಬಾಡಿಗೆ ಮನೆ ಮಾಡಿಕೊಂಡಿದ್ದ ಆಸಿಫ್ ಕಿಲ್ಲೇದಾರ್ ಎನ್ನುವವರು ಅಕ್ರಮವಾಗಿ ಸಂಗ್ರಹಿಸಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸುವ ಕಾಲಕ್ಕೆ ಆರೋಪಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.