
ಪ್ರಜಾವಾಣಿ ವಾರ್ತೆ
ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಾರೂಗೇರಿ ಬಳಿ ಸೋಮವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲೆ ಸಂಚರಿಸುತ್ತಿದ್ದ ಮೂವರು ಸಾವನ್ನಪ್ಪಿದ್ದಾರೆ.
ಮೊರಬ್ ಗ್ರಾಮದ ನಿವಾಸಿ ಗಜಾನನ ಮಹಾದೇವ ವಡೆಯರ್ (22), ಮುಗಳಖೋಡದ ನಿವಾಸಿ ಮಹಾದೇವ ಮಲ್ಲಪ್ಪ ಗೋಲಭಾವಿ (22) ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಾಳಪ್ಪ ಮಲ್ಲಪ್ಪ ಗೋಲಭಾವಿ (26) ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತಪಡಿಸಿದ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಹಾರೂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.