ADVERTISEMENT

ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಲು ಸಲಹೆ: ಕಾ.ಹೋ.ಶಿಂಧೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2025, 4:09 IST
Last Updated 22 ನವೆಂಬರ್ 2025, 4:09 IST
ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿನ ಬಸವೇಶ್ವರ ಪದವಿ ಕಾಲೇಜಿನ ಕ್ರೀಡೆ, ಸಾಂಸ್ಕೃತಿಕ, ಮತ್ತು ಎನ್.ಎಸ್.ಎಸ್. ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು
ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿನ ಬಸವೇಶ್ವರ ಪದವಿ ಕಾಲೇಜಿನ ಕ್ರೀಡೆ, ಸಾಂಸ್ಕೃತಿಕ, ಮತ್ತು ಎನ್.ಎಸ್.ಎಸ್. ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು   

ಹುಕ್ಕೇರಿ: ವಿದ್ಯಾರ್ಥಿಗಳು ನಿರಂತರ ಓದುವ ಹವ್ಯಾಸ ಬೆಳೆಸಿಕೊಂಡು ಸರ್ವಾಂಗೀಣ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ಕಾ.ಹೋ.ಶಿಂಧೆ ಹೇಳಿದರು.

ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿನ ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ಕ್ರೀಡೆ, ಸಾಂಸ್ಕೃತಿಕ ಮತ್ತು ಎನ್.ಎಸ್.ಎಸ್.ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಬಿ.ಎ. ಮತ್ತು ಬಿ.ಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು.

ಬಸವೇಶ್ವರ ಪಿಯು ಕಾಲೇಜಿನ ಪ್ರಾಧ್ಯಾಪಕಿ ಆರ್.ಆರ್.ಹಿರೇಮನಿ ಮಾತನಾಡಿ, ವಿದ್ಯಾರ್ಥಿಗಳು ತಮಗೆ ಸಿಕ್ಕಿರುವ ಅವಕಾಶಗಳನ್ನು ಬಳಸಿಕೊಂಡು ಯಶಸ್ಸು ಪಡೆಯಬೇಕು ಎಂದು ಸಲಹೆ ನೀಡಿದರು.

ADVERTISEMENT

ಪ್ರಾಧ್ಯಾಪಕ ಎಂ.ಎಲ್.ಮಗದುಮ್ಮ, ಲಕ್ಷ್ಮೀ ಜಕ್ಕಪ್ಪಗೋಳ, ಕಲಾವತಿ ಸಾರಾಪೂರೆ, ಭಾಗ್ಯಶ್ರೀ ಗೂಳಪ್ಪಗೋಳ ಅನಿಸಿಕೆ ವ್ಯಕ್ತಪಡಿಸಿದರು. ಪ್ರೊ.ಜೀವನ ಹೊಸಮನಿ, ಶಿಲ್ಪಾ ವಡ್ಡರ ಮಾತನಾಡಿದರು.

ಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಿ.ಎ.ತಳವಾರ ಉದ್ಘಾಟಿಸಿದರು. ಪ್ರಾಚಾರ್ಯ ಎಂ.ಎಂ.ಅಂಗಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರೊ.ಎಂ.ಕೆ.ಹಮ್ಮಣ್ಣವರ ಸ್ವಾಗತಿಸಿದರು. ಪ್ರೊ.ಎ.ವೈ.ಸೋನ್ಯಾಗೋಳ ಪರಿಚಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.