
ಬೆಳಗಾವಿ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭಾನುವಾರ ಧ್ವಜಾರೋಹಣ ನೆರವೇರಿಸಿದರು.
'ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮ ಅಧಿಕಾರ ಕಲ್ಪಿಸಿಕೊಟ್ಟ ದಿನ. ಅಂಬೇಡ್ಕರ್ ರಚಿಸಿದ ಸಂವಿಧಾನ ಭವ್ಯ ಭಾರತಕ್ಕೆ ದಾರಿದೀಪವಾಗಿದೆ. ಜಗತ್ತಿನ ಪ್ರಬಲ ರಾಷ್ಟ್ರವಾಗಿ ಭಾರತ ಹೊರಹೊಮ್ಮಲು ಅದು ಬುನಾದಿಯಾಗಿದೆ' ಎಂದರು.
'ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸವಿನೆನಪಿಗಾಗಿ ವರ್ಷವಿಡೀ ಕಾರ್ಯಕ್ರಮಗಳ ಆಯೋಜನೆಗೆ ₹25 ಕೋಟಿ ಅನುದಾನ ನೀಡುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ' ಎಂದು ಹೇಳಿದರು.
ಪೊಲೀಸರು, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.