ADVERTISEMENT

ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಬೇಕು: ಜಿಲ್ಲಾಧಿಕಾರಿ‌ ರೋಷನ್

​ಪ್ರಜಾವಾಣಿ ವಾರ್ತೆ
Published 3 ಜನವರಿ 2026, 4:16 IST
Last Updated 3 ಜನವರಿ 2026, 4:16 IST
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ, ಗಣರಾಜ್ಯೋತ್ಸವ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ, ಗಣರಾಜ್ಯೋತ್ಸವ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು   

ಬೆಳಗಾವಿ: ‘ಜಿಲ್ಲೆಯಲ್ಲಿ ಜ.26ರಂದು ಸಡಗರದಿಂದ ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಗಣರಾಜ್ಯೋತ್ಸವ ಆಚರಣೆಗೆ ವಿವಿಧ ಸಮಿತಿ ರಚಿಸಲಾಗಿದೆ. ಅವು ತಮಗೆ ವಹಿಸಿದ ಜವಾಬ್ದಾರಿ ಸರಿಯಾಗಿ ನಿರ್ವಹಿಸಬೇಕು. ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು’ ಎಂದರು.

‘ಗಣರಾಜ್ಯೋತ್ಸವ ಆಚರಣೆಗೆ ನಗರದ ಎಲ್ಲ‌ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರಬೇಕು. ನಗರದ ಪ್ರಮುಖ ವೃತ್ತಗಳನ್ನು ಶುಚಿಗೊಳಿಸಿ, ವಿದ್ಯುದ್ದೀಪಗಳಿಂದ ಅಲಂಕರಿಸಬೇಕು’ ಎಂದು ತಿಳಿಸಿದರು.

ADVERTISEMENT

ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್‌, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಎಂ.ಕಾರ್ತಿಕ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.