ADVERTISEMENT

ಬಸ್‌ ಸೌಕರ್ಯ ಕಲ್ಪಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2019, 11:23 IST
Last Updated 1 ಆಗಸ್ಟ್ 2019, 11:23 IST
ಅಥಣಿಯಿಂದ ಮಂಗಸೂಳಿ ಮಾರ್ಗವಾಗಿ ಶೇಡಬಾಳ ರೈಲ್ವೆ ನಿಲ್ದಾಣಕ್ಕೆ ಪ್ರತ್ಯೇಕ ಬಸ್ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು
ಅಥಣಿಯಿಂದ ಮಂಗಸೂಳಿ ಮಾರ್ಗವಾಗಿ ಶೇಡಬಾಳ ರೈಲ್ವೆ ನಿಲ್ದಾಣಕ್ಕೆ ಪ್ರತ್ಯೇಕ ಬಸ್ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು   

ಬೆಳಗಾವಿ: ಅಥಣಿಯಿಂದ ಮಂಗಸೂಳಿ ಮಾರ್ಗವಾಗಿ ಶೇಡಬಾಳ ರೈಲ್ವೆ ನಿಲ್ದಾಣಕ್ಕೆ ಪ್ರತ್ಯೇಕ ಬಸ್ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪಕ್ಷದ ಕಿಸಾನ್‌ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸುರೇಂದ್ರ ತವಲಕರ ಮಾತನಾಡಿ, ‘ಮಹಾರಾಷ್ಟ್ರದ ಗಡಿಭಾಗದಲ್ಲಿರುವತಾಲ್ಲೂಕಿನ ಸುಕ್ಷೇತ್ರ ಮಂಗಸೂಳಿಯ ಮಲ್ಲಯ್ಯ ದೇವಸ್ಥಾನಕ್ಕೆ ಪ್ರತಿದಿನ ನೂರಾರು ಭಕ್ತರು ಆಗಮಿಸುತ್ತಾರೆ. ಆದರೆ, ದೇವಸ್ಥಾನಕ್ಕೆ ಸಮರ್ಪಕ ಬಸ್‌ ಸೌಕರ್ಯ ಇಲ್ಲದಿರುವುದರಿಂದ ಭಕ್ತರಿಗೆ ಅನಾನುಕೂಲ ಉಂಟಾಗುತ್ತಿದೆ. ಹೀಗಾಗಿ, ಅಥಣಿಯಿಂದ ಮಂಗಸೂಳಿ ಮಾರ್ಗವಾಗಿ ಶೇಡಬಾಳ ರೈಲ್ವೆ ನಿಲ್ದಾಣಕ್ಕೆ ಬಸ್‌ ವ್ಯವಸ್ಥೆ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

‘ವಿಯಪುರದಿಂದ ಕೊಲ್ಲಾಪುರಕ್ಕೆ ಹೋಗುವ ಬಸ್‌ಗಳನ್ನು ಮಂಗಸೂಳಿ ಮಾರ್ಗವಾಗಿ ಓಡಿಸಬೇಕು. ದೇವಸ್ಥಾನಕ್ಕೆ ನಿಲುಗಡೆಯ ವ್ಯವಸ್ಥೆಯನ್ನು ಮಾಡಬೇಕು. ಇದರಿಂದ ಮಹಾರಾಷ್ಟ್ರ ಹಾಗೂ ರಾಜ್ಯದ ಭಕ್ತರಿಗೆ ಅನುಕೂಲವಾಗುತ್ತದೆ’ ಎಂದು ಆಗ್ರಹಿಸಿದರು.

ADVERTISEMENT

ಕಾರ್ಯಕರ್ತರಾದ ಕೆ.ಜಿ. ಪಾಟೀಲ, ದುರ್ಗೇಶ ಮೆತ್ರಿ, ಸದಾನಂದ ಪಾಟೀಲ, ಇಸ್ಮಾಯಿಲ್ ಮುಲ್ಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.