ADVERTISEMENT

ಬೆಳಗಾವಿ| ಬ್ರಾಹ್ಮಣರಿಗೆ ಮೀಸಲಾತಿ: ವೆಬಿನಾರ್‌ ನಾಳೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2020, 16:50 IST
Last Updated 24 ಜುಲೈ 2020, 16:50 IST

ಬೆಳಗಾವಿ: ‘ರಾಜ್ಯ ಸರ್ಕಾರ ಇತ್ತೀಚೆಗೆ ಬ್ರಾಹ್ಮಣರಿಗೆ ಶೇ 10ರಷ್ಟು ಮೀಸಲಾತಿ ಜಾರಿ ಮಾಡಿ ಆದೇಶಿಸಿದೆ. ಇದರಿಂದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಆಗುವ ಪರಿಣಾಮಗಳ ಕುರಿತು ಜುಲೈ 26ರಂದು ಸಂಜೆ 4ಕ್ಕೆ ವೆಬಿನಾರ್‌ ಮೂಲಕ ಚಿಂತನ-ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ವಿದ್ಯಾರ್ಥಿ ಬಂಧುತ್ವ ವೇದಿಕೆ ಮತ್ತು ಮಾನವ ಬಂಧುತ್ವ ವೇದಿಕೆ ತಿಳಿಸಿವೆ.

‘ಕಲಬುರ್ಗಿಯ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ಚಾಲನೆ ನೀಡುವರು. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಉಸ್ತೂರಿ ಮತ್ತು ಧುತ್ತರಗಾಂವ ಮಠದವಿಶ್ವನಾಥ ಕೋರಣೇಶ್ವರ ಸ್ವಾಮೀಜಿ ಪಾಲ್ಗೊಳ್ಳುವರು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆಯ ಸಹಾಯಕ ಪ್ರಾಧ್ಯಾಪಕ ಡಾ.ಪ್ರದೀಪ ರಾಮಾವತ್ ವಿಷಯ ಮಂಡಿಸುವರು. ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ, ವಕೀಲ ಎನ್. ಅನಂತ ನಾಯ್ಕ, ವಿದ್ಯಾರ್ಥಿ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ತೋಳಿ ಭರಮಣ್ಣ ಭಾಗವಹಿಸಲಿದ್ದಾರೆ.

ಆಸಕ್ತರು ವೆಬಿನಾರ್ ಝೂಮ್ ಆ್ಯಪ್‌ ಮೂಲಕ ಮೀಟಿಂಗ್ ಐಡಿ:5992672811 ಪಾಸ್‌ವರ್ಡ್‌: AILUKARNA3 ನೆರವಿನಿಂದ ಕಾರ್ಯಕ್ರಮವನ್ನು ಸಾಮಾಜಿಕ ಜಾಲತಾಣದಲ್ಲಿ ವೀಕ್ಷಿಸುವಂತೆ ಸಂಘಟನೆ ಕೋರಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.