ADVERTISEMENT

‘2ಎ’ ಮೀಸಲಾತಿಗಾಗಿ ಕ್ರಾಂತಿಕಾರಿ ಹೋರಾಟದ ಸಂಕಲ್ಪ: ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2025, 0:12 IST
Last Updated 21 ಸೆಪ್ಟೆಂಬರ್ 2025, 0:12 IST
ಬಸವಜಯ ಮೃತ್ಯುಂಜಯ ಸ್ವಾಮೀಜಿ
ಬಸವಜಯ ಮೃತ್ಯುಂಜಯ ಸ್ವಾಮೀಜಿ   

ಹಾರೂಗೇರಿ (ಬೆಳಗಾವಿ ಜಿಲ್ಲೆ): ‘ಪಂಚಮಸಾಲಿ ಸಮಾಜಕ್ಕೆ ‘2ಎ’ ಮೀಸಲಾತಿಗೆ ಆಗ್ರಹಿಸಿ ಕ್ರಾಂತಿಕಾರಿ ಹೋರಾಟದ ಸಂಕಲ್ಪ ತೊಟ್ಟಿದ್ದೇವೆ’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಶನಿವಾರ ಇಲ್ಲಿ ಪ್ರಕಟಿಸಿದರು. 

ರಾಯಬಾಗ ತಾಲ್ಲೂಕಿನ ಹಾರೂಗೇರಿಯಲ್ಲಿ ನಡೆದ ‘ಪ್ರತಿಜ್ಞಾ ಕ್ರಾಂತಿ’ ಹೋರಾಟದಲ್ಲಿ ಅವರು, ‘ಮೀಸಲಾತಿ ಸಿಗುವವರೆಗೂ ಹೋರಾಟ ಮುಂದುವರೆಸುತ್ತೇವೆ’ ಎಂದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ‘ರಾಜ್ಯ ಸರ್ಕಾರದಿಂದ ಮೀಸಲಾತಿ ಸಿಗುವ ಭರವಸೆ ಇಲ್ಲ. ಮುಂದೆ ಎಲ್ಲ ಅಡೆ–ತಡೆ ಮೀರಿ ಹೋರಾಟ ಮಾಡಬೇಕಿದೆ’ ಎಂದರು.

ADVERTISEMENT

ಶಾಸಕ ಸಿದ್ದು ಸವದಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಮಾತನಾಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.