ಅಪಘಾತ
–ಪ್ರಾತಿನಿಧಿಕ ಚಿತ್ರ
ಬೆಳಗಾವಿ: ತಾಲ್ಲೂಕಿನ ಹೊನಗಾ ಗ್ರಾಮದ ಬಳಿ ಶನಿವಾರ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಟ್ರಕ್ ಹರಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನೀಲಾ ಸದಾಶಿವ ಕೋರೆ (46) ಮತ್ತು ಮಹಾದೇವಿ ನಾವಲಗಿ (53) ಮೃತಪಟ್ಟವರು. ಮಹಿಳೆಯರು ಹೊನಗಾದಿಂದ ಯಳ್ಳೂರ ಗ್ರಾಮಕ್ಕೆ ಮದುವೆಗೆ ಹೊರಟಿದ್ದರು. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುಣೆ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಒಂದು ಕಡೆಯಿಂದ ಇನ್ನೊಂದು ಕಡೆಗೆ ದಾಟುತ್ತಿದ್ದ ವೇಳೆ ಟ್ರಕ್ ವೇಗವಾಗಿ ಬಂದಿದೆ. ಇಬ್ಬರೂ ಅದರಡಿಗೆ ಸಿಲುಕು ಸ್ಥಳದಲ್ಲೇ ಸಾವನ್ನಪ್ಪಿದರು ಎಂದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇದರಲ್ಲಿ ಟ್ರಕ್ ಚಾಲಕನ ಲೋಪವಿದ್ದು ಕೂಡಲೇ ಬಂಧಿಸಿ, ಶಿಕ್ಷೆ ವಿಧಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ಕಾಕತಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.
ಟ್ರಕ್ ಹಾಯ್ದು ಬೈಕ್ ಸಾವರ ಸಾವು: ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಹಲಕಿ ಗ್ರಾಮದ ಸಮೀಪ ಬೆಳಗಾವಿ– ಬಾಗಲಕೋಟೆ ರಸ್ತೆಯ ಮೇಲೆ ಟ್ರಕ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ, ಬೆಳಗಾವಿಯ ಶ್ರೀನಗರದ ನಿವಾಸಿ ದಯಾನಂದ ಮಹಾಂತಪ್ಪ ಕಂಠಿ (54) ಸಾವನ್ನಪ್ಪಿದ್ದಾರೆ.
ಟ್ರಕ್ ಚಾಲಕ ಬಸಿಡೋಣಿ ಗ್ರಾಮದ ಮಲ್ಲಿಕಾರ್ಜುನ ಪತ್ರೆಪ್ಪ ಕೊಳ್ಳಿ ಮೇಲೆ ಪ್ರಕರಣ ದಾಖಲಾಗಿದೆ. ಮೃತನ ಪತ್ನಿ ಸರಸ್ವತಿ ದೂರು ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.