ADVERTISEMENT

ಚಿಕ್ಕೋಡಿ: ಸಿ.ಎಂ ಭೇಟಿ ಹಿನ್ನೆಲೆ ತರಾತುರಿಯಲ್ಲಿ ರಸ್ತೆ ದುರಸ್ತಿ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2024, 10:41 IST
Last Updated 5 ಆಗಸ್ಟ್ 2024, 10:41 IST
   

ಚಿಕ್ಕೋಡಿ: ಪ್ರವಾಹಪೀಡಿತ ಪ್ರದೇಶಗಳ ವೀಕ್ಷಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ-ಕಾಗವಾಡ ಮಾರ್ಗದಲ್ಲಿನ ರಸ್ತೆಯನ್ನು ತರಾತುರಿಯಲ್ಲಿ ದುರಸ್ತಿ ಮಾಡಲಾಗುತ್ತಿದೆ.

ಸಂಜೆ 5ಕ್ಕೆ ಕಾಗವಾಡ ತಾಲ್ಲೂಕಿನ ಜುಗೂಳ ಗ್ರಾಮಕ್ಕೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಹಾಗಾಗಿ ಚಿಕ್ಕೋಡಿಯಿಂದ ಕಾಗವಾಡಕ್ಕೆ ಸಾಗುವ ಮಾರ್ಗದಲ್ಲಿನ ರಸ್ತೆಗೆ ತೇಪೆ ಹಚ್ಚಲಾಗುತ್ತಿದೆ.

ಲೋಕೋಪಯೋಗಿ ಇಲಾಖೆ ನಡೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ADVERTISEMENT

'ಇಷ್ಟುದಿನ ಸುಮ್ಮನಿದ್ದ ಅಧಿಕಾರಿಗಳು ಈಗ ರಸ್ತೆಗಳಿಗೆ ತೇಪೆ ಹಚ್ಚುತ್ತಿರುವುದು ಸರಿಯಲ್ಲ' ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.