ADVERTISEMENT

ಹಂಗರಗಾ: ₹ 2.17 ಕೋಟಿ ರಸ್ತೆ ಕಾಮಗಾರಿಗೆ ಪೂಜೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2021, 7:27 IST
Last Updated 17 ಜನವರಿ 2021, 7:27 IST
ಬೆಳಗಾವಿ ತಾಲ್ಲೂಕಿನ ಹಂಗರಗಾ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪೂಜೆ ಸಲ್ಲಿಸಿ ಶನಿವಾರ ಚಾಲನೆ ನೀಡಿದರು
ಬೆಳಗಾವಿ ತಾಲ್ಲೂಕಿನ ಹಂಗರಗಾ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪೂಜೆ ಸಲ್ಲಿಸಿ ಶನಿವಾರ ಚಾಲನೆ ನೀಡಿದರು   

ಬೆಳಗಾವಿ: ತಾಲ್ಲೂಕಿನ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಂಗರಗಾ ಗ್ರಾಮದಲ್ಲಿ ₹ 2.17 ಕೋಟಿ ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣ ಕಾಮಕಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಶನಿವಾರ ಪೂಜೆ ನೆರವೇರಸಿ ಚಾಲನೆ ನೀಡಿದರು.

ಹಂಗರಗಾ ಗ್ರಾಮದಿಂದ ಕಲ್ಲೆಹೋಳ ಮುಖ್ಯ ರಸ್ತೆಯವರೆಗೆ ಡಾಂಬರೀಕರಣ ಆಗಲಿದೆ. ನಿಗದಿತ ಸಮಯದಲ್ಲಿ ಮುಗಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

‘ಅಭಿವೃದ್ಧಿ ಕೆಲಸಗಳು ನಿಲ್ಲಬಾರದೆನ್ನುವ ಕಾರಣಕ್ಕೆ ಕ್ಷೇತ್ರದಾದ್ಯಂತ ಸಂಚರಿಸುತ್ತಿದ್ದೇನೆ. ಜನಪ್ರತಿನಿಧಿಯಾಗಿ ನನ್ನ ಕರ್ತವ್ಯವನ್ನು ಸಾಧ್ಯವಾದಷ್ಟರ ಮಟ್ಟಿಗೆ ನಿರ್ವಹಿಸುತ್ತಿದ್ದೇನೆ. ಚುನಾವಣೆಗೆ ಮುನ್ನ ಕೊಟ್ಟರುವ ಮಾತು ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇನೆ. ಜನರು ನನ್ನ ಮೇಲಿಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ’ ಎಂದರು.

ADVERTISEMENT

ಗ್ರಾಮದ ಹಿರಿಯರು, ಮುಖಂಡ ಯುವರಾಜ ಕದಂ ಹಾಗೂ ಗ್ರಾಮಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.