ADVERTISEMENT

ರೈಲ್ವೆ ಮೇಲ್ಸೇತುವೆ ಕಾಮಗಾರಿ ತ್ವರಿತಗೊಳಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 15:58 IST
Last Updated 12 ಅಕ್ಟೋಬರ್ 2021, 15:58 IST
ಬೆಳಗಾವಿಯ 3ನೇ ರೈಲ್ವೆ ಗೇಟ್‌ ಬಳಿ ರಸ್ತೆ ಮೇಲ್ಸೇತುವೆ ಕಾಮಗಾರಿಯನ್ನು ಸಂಸದೆ ಮಂಗಲಾ ಅಂಗಡಿ ಮಂಗಳವಾರ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು
ಬೆಳಗಾವಿಯ 3ನೇ ರೈಲ್ವೆ ಗೇಟ್‌ ಬಳಿ ರಸ್ತೆ ಮೇಲ್ಸೇತುವೆ ಕಾಮಗಾರಿಯನ್ನು ಸಂಸದೆ ಮಂಗಲಾ ಅಂಗಡಿ ಮಂಗಳವಾರ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು   

ಬೆಳಗಾವಿ: ಇಲ್ಲಿನ ಖಾನಾಪುರ ರಸ್ತೆಯ 3ನೇ ರೈಲ್ವೆ ಗೇಟ್‌ ಬಳಿ ರಸ್ತೆ ಮೇಲ್ಸೇತುವೆ ಕಾಮಗಾರಿಯನ್ನು ಸಂಸದೆ ಮಂಗಲಾ ಅಂಗಡಿ ಮಂಗಳವಾರ ವೀಕ್ಷಿಸಿದರು.

ಕಾಮಗಾರಿಯು ಕುಂಟುತ್ತಾ ಸಾಗಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ‘ತ್ವರಿತವಾಗಿ ಕೆಲಸ ನಡೆಸಬೇಕು. 2022ರ ಜನವರಿಯೊಳಗೆ ಪೂರ್ಣಗೊಳಿಸಬೇಕು. ಜನರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು. ಪ್ರತಿ 15 ದಿನಗಳಿಗೊಮ್ಮೆ ಪ್ರಗತಿ ಪರಿಶೀಲನೆ ನಡೆಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಕೋವಿಡ್ ಲಾಕ್‌ಡೌನ್, ಕಾರ್ಮಿಕರ ಕೊರತೆಯಿಂದ ಕಾಮಗಾರಿ ನಿರೀಕ್ಷಿತ ಮಟ್ಟದಲ್ಲಿ ನಡೆಯಲಿಲ್ಲ’ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದರು.

ADVERTISEMENT

ರೈಲ್ವೆ ಇಲಾಖೆಯ ಉಪ ಮುಖ್ಯ ಎಂಜಿನಿಯರ್‌ ಚಂದ್ರಶೇಖರ್, ನಗರಪಾಲಿಕೆ ಎಂಜಿನಿಯರ್‌ ಲಕ್ಷ್ಮಿ ಸುಳಗೇಕರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಬಿ. ಕುಸನಾಳ, ಬೆಳಗಾವಿ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ರೋಹನ ಜವಳಿ, ಸದಸ್ಯರಾದ ಸಚಿನ ಸಬ್ನಿಸ್, ರಾಜೇಂದ್ರ ಹರಕುಣಿ, ಪ್ರಭಾಕರ ನಾಗರಮುನ್ನೋಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.