ADVERTISEMENT

ದರೋಡೆ, ಅತ್ಯಾಚಾರ ಸೇರಿ ಹಲವು ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಗೆ ಗುಂಡೇಟು

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2025, 4:03 IST
Last Updated 30 ಆಗಸ್ಟ್ 2025, 4:03 IST
<div class="paragraphs"><p>ಜಿಲ್ಲಾಸ್ಪತ್ರೆಗೆ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಭೇಟಿ ನೀಡಿ, ಗಾಯಗೊಂಡ ಪೊಲೀಸರ ಆರೋಗ್ಯ ವಿಚಾರಿಸಿದರು.</p></div>

ಜಿಲ್ಲಾಸ್ಪತ್ರೆಗೆ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಭೇಟಿ ನೀಡಿ, ಗಾಯಗೊಂಡ ಪೊಲೀಸರ ಆರೋಗ್ಯ ವಿಚಾರಿಸಿದರು.

   

ಚನ್ನಮ್ಮನ ಕಿತ್ತೂರು: ದರೋಡೆ, ಅತ್ಯಾಚಾರ ಸೇರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸುತ್ತಿದ್ದಾಗ, ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದವನಿಗೆ ಪಿಎಸ್ಐ ಪ್ರವೀಣ ಗಂಗೋಳ ಗುಂಡೇಟು ನೀಡಿದ್ದಾರೆ.

ಚನ್ನಮ್ಮನ ಕಿತ್ತೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಬದಿಗಿರುವ ನಿಚ್ಚಣಕಿ ಬಂಗ್ಲೆ ಬಳಿ ಶನಿವಾರ ಬೆಳಿಗ್ಗೆ ಈ ಘಟನೆ ಸಂಭವಿಸಿದೆ.

ADVERTISEMENT

‘ಆರೋಪಿ ರಮೇಶ ಕಿಲಾರಿ ಎಂಬಾತನು ಪೊಲೀಸ್ ಕಾನ್‌ಸ್ಟೆಬಲ್ ಷರೀಫ್ ದಫೇದಾರ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಗಾಯಗೊಳಿಸಿದ. ಆತನಿಗೆ ಎಚ್ಚರಿಕೆ ನೀಡಲು ಗಾಳಿಯಲ್ಲಿ ಗುಂಡು ಹಾರಿಸಲಾಯಿತು. ಆದರೆ,‌ ಆರೋಪಿ ಅಲ್ಲಿದ್ದ ಇತರೆ ಪೊಲೀಸರ ಮೇಲೆ ದಾಳಿ ಮಾಡಲು ಪ್ರಯತ್ನಿಸಿದಾಗ, ಸ್ವಯಂ ರಕ್ಷಣೆಗಾಗಿ, ಸಬ್‌ ಇನ್‌ಸ್ಪೆಕ್ಟರ್ ಪ್ರವೀಣ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವ ಆರೋಪಿ ಮತ್ತು ಪಿಎಸ್ಐ ಸೇರಿ ಮೂವರು ಸಿಬ್ಬಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಸುದ್ದಿಗಾರರಿಗೆ ತಿಳಿಸಿದರು.

‘ಆರೋಪಿ ಮೇಲೆ ನಾಲ್ಕು ಡಕಾಯಿತಿ, ತಲಾ ಒಂದು ದರೋಡೆ, ಸಾಮೂಹಿಕ ಅತ್ಯಾಚಾರ, ಶಸ್ತ್ರಾಸ್ತ್ರ ಪ್ರಕರಣ ಮತ್ತು ಇತರೆ‌ ಮೂರು ಪ್ರಕರಣಗಳಿವೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಜಿಲ್ಲಾಸ್ಪತ್ರೆಗೆ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಭೇಟಿ ನೀಡಿ, ಗಾಯಗೊಂಡ ಪೊಲೀಸರ ಆರೋಗ್ಯ ವಿಚಾರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.