ಬೆಳಗಾವಿ: ‘ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗೆ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ₹100 ಕೋಟಿ ಅನುದಾನ ಮಂಜೂರು ಮಾಡಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಹರ್ಷ ವ್ಯಕ್ತಪಡಿಸಿದ್ದಾರೆ.
‘ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ 2024-25ನೇ ಸಾಲಿನ ಯೋಜನೆಯಡಿ ಈ ಅನುದಾನ ಸಿಗಲಿದೆ. ಕರ್ನಾಟಕದಲ್ಲಿ ಆಯ್ಕೆಯಾದ ಎರಡು ದೇವಸ್ಥಾನಗಳಲ್ಲಿ ಯಲ್ಲಮ್ಮ ದೇವಿ ದೇವಸ್ಥಾನವೂ ಒಂದಾಗಿದೆ. ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಇತ್ತೀಚೆಗೆ ಭೇಟಿಯಾಗಿ, ಈ ಯೋಜನೆಗೆ ಅನುಮೋದನೆ ನೀಡುವಂತೆ ಕೋರಿದ್ದೆ. ಅದಕ್ಕೆ ಸ್ಪಂದಿಸಿ ಅನುಮೋದನೆ ಕೊಟ್ಟಿದ್ದಾರೆ’ ಎಂದು ತಿಳಿಸಿದ್ದಾರೆ.
‘₹100 ಕೋಟಿ ಅನುದಾನದಿಂದ ದೇವಸ್ಥಾನದಲ್ಲಿ ಹೆಚ್ಚಿನ ಮೂಲಸೌಕರ್ಯ ಸೃಷ್ಟಿಯಾಗಲಿವೆ. ಭಕ್ತರಿಗೆ ಅನುಕೂಲವಾಗಲಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.