ADVERTISEMENT

ಕೃಷಿ ಇಲಾಖೆಯಿಂದ ಸ್ಟಾರ್ಟ್‌ ಅಪ್‌ಗಳಿಗೆ ₹122.50 ಕೋಟಿ ಅನುದಾನ: ಈರಣ್ಣ ಕಡಾಡಿ

ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2024, 13:03 IST
Last Updated 11 ಡಿಸೆಂಬರ್ 2024, 13:03 IST
ಈರಣ್ಣ ಕಡಾಡಿ, ರಾಜ್ಯಸಭಾ ಸದಸ್ಯ
ಈರಣ್ಣ ಕಡಾಡಿ, ರಾಜ್ಯಸಭಾ ಸದಸ್ಯ   

ಮೂಡಲಗಿ: ‘ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು 2018-19ನೇ ಸಾಲಿನಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 2019-20 ರಿಂದ 2023-24ರ ವರೆಗೆ 1708 ಕೃಷಿ ಸ್ಟಾರ್ಟ್‌ ಅಪ್‌ಗಳಿಗೆ ₹122.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ರಾಮನಾಥ್ ಠಾಕೂರ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ’ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಮತ್ತು ಸಂಬಂಧಿತ ಉದ್ಯಮಗಳಲ್ಲಿ ಸ್ಟಾರ್ಟ್‌ ಅಪ್‌ಗಳಿಗೆ ಆರ್ಥಿಕ ನೆರವು ನೀಡಲು ಸರ್ಕಾರದ ಯೋಜನೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ, ಕೇಂದ್ರ ಸರ್ಕಾರವು ಸೆ.3, 2024 ರಿಂದ ನಬಾರ್ಡ್‌ ಮೂಲಕ ಸ್ಟಾರ್ಟ್‌ ಅಪ್‌ಗಳಿಗೆ ಬೆಂಬಲ ಒದಗಿಸುವ ಯೋಜನೆಯನ್ನು ಪ್ರಾರಂಭಿಸಿದೆ’ ಎಂದು ತಿಳಿಸಿದ್ದಾರೆ.

‘ರೈತರ ಹೊಲಗಳಲ್ಲಿ ಉತ್ತಮ ಕೃಷಿ ತಂತ್ರಜ್ಞಾನಗಳ ಉತ್ಪಾದನಾ ಸಾಮರ್ಥ್ಯವನ್ನು ಸಾಧಿಸಲು ಪ್ರಾತ್ಯಕ್ಷಿಕೆ ಜ್ಞಾನದ ಮೂಲಕ ರೈತರಿಗೆ ಕೃಷಿ ಆವಿಷ್ಕಾರಗಳು ಮತ್ತು ತಂತ್ರಜ್ಞಾನಗಳ ಬಗ್ಗೆ ಅರಿವು ಮೂಡಿಸುವುದು. ರೈತರಿಗೆ ತಾಂತ್ರಿಕ ಮತ್ತು ವೈಜ್ಞಾನಿಕ ಸಹಾಯ ಒದಗಿಸಲು ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ ಹೆಚ್ಚಿನ ಸಂಖ್ಯೆಯ ವಿಸ್ತರಣಾ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವರು ಉತ್ತರಿಸಿದ್ದಾರೆ’ ಎಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.