ADVERTISEMENT

ಶಿವಲಿಂಗೇಶ್ವರ ಶ್ರೀ ಆಶೀರ್ವಾದ ಪಡೆದ ಪಾಟೀಲ

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 15:41 IST
Last Updated 25 ಜೂನ್ 2021, 15:41 IST
ವಿಧಾನಪರಿಷತ್ ವಿರೋಧಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರು ಸಾವಳಗಿಯ ಶಿವಲಿಂಗೇಶ್ವರ ಮಠದಲ್ಲಿ ಶುಕ್ರವಾರ ಶಿವಲಿಂಗೇಶ್ವರ ಕುಮಾರೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು
ವಿಧಾನಪರಿಷತ್ ವಿರೋಧಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರು ಸಾವಳಗಿಯ ಶಿವಲಿಂಗೇಶ್ವರ ಮಠದಲ್ಲಿ ಶುಕ್ರವಾರ ಶಿವಲಿಂಗೇಶ್ವರ ಕುಮಾರೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು   

ಸಾವಳಗಿ (ಗೋಕಾಕ ತಾ.): ಇಲ್ಲಿನ ಶಿವಲಿಂಗೇಶ್ವರ ಮಠಕ್ಕೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರು ಶುಕ್ರವಾರ ಭೇಟಿ ನೀಡಿ ಶಿವಲಿಂಗೇಶ್ವರ ಕುಮಾರೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ರಾಜಕಾರಣದಲ್ಲಿ ಧರ್ಮ ಇರಬೇಕೆ ಹೊರತು ಧರ್ಮದಲ್ಲಿ ರಾಜಕಾರಣ ಇರಬಾರದು. ಆದರೆ, ಬಿಜೆಪಿಯವರು ಧರ್ಮದಲ್ಲೂ ರಾಜಕಾರಣ ಮಾಡುತ್ತಾರೆ. ಅದೇ ನಮಗೂ ಅವರಿಗೂ ಇರುವ ವ್ಯತ್ಯಾಸ’ ಎಂದರು.

‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್ 2ನೇ ಅಲೆಯನ್ನು ಸಮಪರ್ಕವಾಗಿ ನಿರ್ವಹಿಸಲಿಲ್ಲ. ನಿರ್ಲಕ್ಷ್ಯ ವಹಿಸುವ ಮೂಲಕ ಜನರನ್ನು ಪ್ರಾಯೋಜಿತ ಕೊಲೆ ಮಾಡಿದೆ. ಇದು ಖಂಡನೀಯ. ಇದು ಮಂದುವರಿಯಬಾರದು. ಹೀಗಾಗಿ, ಜಿಲ್ಲಾಧಿಕಾರಿ ಭೇಟಿಯಾಗಿ ಕೋವಿಡ್-3ನೇ ಅಲೆ ನಿಯಂತ್ರಣಕ್ಕೆ ಬೇಕಾದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದರು.

ADVERTISEMENT

‘ಮುಂದಿನ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.