ಬೆಳಗಾವಿ: ಇಲ್ಲಿನ ಸದಾಶಿವನಗರ ಪ್ರದೇಶವನ್ನು ‘ಕಂಟೈನ್ಮೆಂಟ್ ಝೋನ್’ನಿಂದ ಮುಕ್ತಗೊಳಿಸಿ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.
ಮಹಾರಾಷ್ಟ್ರದ ಮುಂಬೈನಿಂದ ಅಕ್ರಮವಾಗಿ ಪ್ರವೇಶ ಪಡೆದಿದ್ದ ಈ ಬಡಾವಣೆಯ ಗರ್ಭಿಣಿಗೆ ಕೋವಿಡ್–19 ಸೋಂಕು ದೃಢಪಟ್ಟಿತ್ತು. ಹೀಗಾಗಿ, 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಹಾಗೂ 5 ಕಿ.ಮೀ. ವ್ಯಾಪ್ತಿಯನ್ನು ಬಫರ್ ಝೋನ್ ಎಂದು ಘೋಷಿಸಲಾಗಿತ್ತು. ಸೋಂಕಿತೆ ಗುಣಮುಖವಾಗಿದ್ದು, ಅವರೊಂದಿಗೆ ಪ್ರಥಮ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದಿದ್ದವರ ವರದಿ ನೆಗೆಟಿವ್ ಬಂದಿದೆ. ಹೀಗಾಗಿ, ಕಂಟೈನ್‌ಂಟ್ ಝೋನ್‌ನಿಂದ ಕೈಬಿಡಲಾಗಿದೆ (ಡಿನೋಟಿಫೈ) ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.