ADVERTISEMENT

ಸ್ವಾತಂತ್ರ್ಯ ದಿನ: ಪ್ರಧಾನಿಯೊಂದಿಗೆ ಭಾಗವಹಿಸಲು ವಿದ್ಯಾರ್ಥಿ ಸಾಗರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2024, 14:13 IST
Last Updated 8 ಆಗಸ್ಟ್ 2024, 14:13 IST
ಸಾಗರ ಬೆಕ್ಕೇರಿ
ಸಾಗರ ಬೆಕ್ಕೇರಿ   

ಚಿಕ್ಕೋಡಿ: ತಾಲ್ಲೂಕಿನ ಕೇರೂರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಸಾಗರ ಮಲ್ಲಪ್ಪ ಬೆಕ್ಕೇರಿ 77ನೇ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅತಿಥಿಯಾಗಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ಇಡೀ ರಾಜ್ಯದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾದ 6 ಜನ ವಿದ್ಯಾರ್ಥಿಗಳ ಪೈಕಿ ಸಾಗರ ಬೆಕ್ಕೇರಿ ಅವರು ಒಬ್ಬರಾಗಿದ್ದಾರೆ.

ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ‘ಮೇರಿ ಮಿಟ್ಟಿ ಮೇರಾ ದೇಶ’ ಕಾರ್ಯಕ್ರಮದಲ್ಲಿ ಅಮೃತ ವಾಟಿಕಾ ನಿರ್ಮಾಣ ಮಾಡಿದ್ದಕ್ಕಾಗಿ ಕಾರ್ಯಕ್ರಮದ ಅಧಿಕಾರಿ ಶ್ರೀಶೈಲ ಕೋಲಾರ ಅವರ ಮಾರ್ಗದರ್ಶನದಲ್ಲಿ ಎನ್ಎಸ್ಎಸ್ ಘಟಕದ ವಿದ್ಯಾರ್ಥಿ ಸಾಗರ ಬೆಕ್ಕೇರಿ ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT