ADVERTISEMENT

ಹುಕ್ಕೇರಿ: ₹4 ಲಕ್ಷ ಮೌಲ್ಯದ ಶ್ರೀಗಂಧ ಕಟ್ಟಿಗೆ ವಶ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2024, 15:55 IST
Last Updated 19 ಮಾರ್ಚ್ 2024, 15:55 IST
ಹುಕ್ಕೇರಿ ತಾಲ್ಲೂಕಿನ ಗುಡಸ್ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಕಾರು ಸಮೇತ ಶ್ರೀಗಂಧ ಕಟ್ಟಿಗೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡರು
ಹುಕ್ಕೇರಿ ತಾಲ್ಲೂಕಿನ ಗುಡಸ್ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಕಾರು ಸಮೇತ ಶ್ರೀಗಂಧ ಕಟ್ಟಿಗೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡರು   

ಹುಕ್ಕೇರಿ: ತಾಲ್ಲೂಕಿನ ಗುಡಸ್ ಗ್ರಾಮದ ಗಾಯರಾಣ ಪ್ರದೇಶಕ್ಕೆ ಹೊಂದಿಕೊಂಡಿರುವ ಲಕ್ಷ್ಮೀದೇವಿ ಗುಡಿಯ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಗಂಧ ತುಂಡುಗಳನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.

ಖಚಿತ ಮಾಹಿತಿ ಆಧರಿಸಿ ಹುಕ್ಕೇರಿ ವಲಯದ ಸಿಬ್ಬಂದಿ ಕಾರೊಂದನ್ನು ಬೆನ್ನತ್ತಿ ಹಿಡಿದು ನಿಲ್ಲಿಸಿದಾಗ, ತಕ್ಷಣಕ್ಕೆ ಕತ್ತಲಾಗಿದ್ದರಿಂದ ಆರೋಪಿಗಳು ಕಾರು ಬಿಟ್ಟು ಪರಾರಿಯಾಗಿದ್ದಾರೆ.

ವಾಹನ ಸಮೇತ ₹4 ಲಕ್ಷ ಮೌಲ್ಯದ (40.605 ಕೆ.ಜಿ.) ಶ್ರೀಗಂಧದ ತುಂಡುಗಳನ್ನು ಇಲಾಖೆಯವರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ  ಎಂದು ಆರ್.ಎಫ್.ಒ ಪ್ರಸನ್ನ ಬೆಲ್ಲದ ತಿಳಿಸಿದರು. ‌

ADVERTISEMENT

‌ಮೇಲಧಿಕಾರಿಗಳ ನಿರ್ದೇಶನದಂತೆ ಹುಕ್ಕೇರಿ ವಲಯ ಅರಣ್ಯಾಧಿಕಾರಿ ಪ್ರಸನ್ನ ಬೆಲ್ಲದ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿತ್ತು.

ಹುಕ್ಕೇರಿ ತಾಲ್ಲೂಕಿನ ಗುಡಸ್ ಬಳಿ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ ಶ್ರೀಗಂಧದ ಕಟ್ಟಿಗೆ ತುಂಡುಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.