ADVERTISEMENT

ನಂದಗಡ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 'ವೀರಭೂಮಿ' ಲೋಕಾರ್ಪಣೆ ಮಾಡಿದ ಸಿ.ಎಂ

​ಪ್ರಜಾವಾಣಿ ವಾರ್ತೆ
Published 19 ಜನವರಿ 2026, 9:56 IST
Last Updated 19 ಜನವರಿ 2026, 9:56 IST
   

ನಂದಗಡ (ಬೆಳಗಾವಿ ಜಿಲ್ಲೆ): ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಅವರ ಆರು ಸಹಚರ ವೀರರನ್ನು ಗಲ್ಲಿಗೇರಿಸಿದ ಖಾನಾಪುರ ತಾಲ್ಲೂಕಿನ ನಂದಗಡ ಗ್ರಾಮದಲ್ಲಿ ನಿರ್ಮಿಸಿರುವ ವಸ್ತುಸಂಗ್ರಹಾಲಯ 'ವೀರಭೂಮಿ'ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಲೋಕಾರ್ಪಣೆ ಮಾಡಿದರು.

ಇದಕ್ಕೂ ಮುನ್ನ ನಂದಗಡದ ಐತಿಹಾಸಿಕ ಕೆರೆಯ ಮಧ್ಯೆ ನಿರ್ಮಿಸಿರುವ ರಾಯಣ್ಣನ ಪ್ರತಿಮೆಯನ್ನೂ ಅವರು ಉದ್ಘಾಟನೆ ಮಾಡಿದರು. ಕೆರೆ ಅಭಿವೃದ್ಧಿ ಹಾಗೂ ವಿವಿಧ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳಿಗೂ ಚಾಲನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ನಗರಾಭಿವೃದ್ಧಿ ಸಚಿವರಾದ ಭೈರತಿ ಎಸ್.ಸುರೇಶ ಖಾನಾಪುರ ಶಾಸಕ ವಿಠ್ಠಲ ಹಲಗೇಕರ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ನವದೆಹಲಿ ಪ್ರಕಾಶ ಹುಕ್ಕೇರಿ, ವಾಯವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷ ಭರಮಗೌಡ ಕಾಗೆ, ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೌಜಲಗಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಅಧಿಕಾರಿಗಳು ಪಾಲ್ಗೊಂಡರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.