ADVERTISEMENT

ಸರ್ಕಾರಿ ಗೌರವದೊಂದಿಗೆ ಸಾರಥಿ ಅಂತ್ಯಕ್ರಿಯೆ

ಯೋಧ ಹನುಮಂತರಾವ್‌ ಸಾರಥಿಗೆ ಅಂತಿಮ ನಮನ

​ಪ್ರಜಾವಾಣಿ ವಾರ್ತೆ
Published 29 ಜನವರಿ 2023, 18:30 IST
Last Updated 29 ಜನವರಿ 2023, 18:30 IST
ಬೆಳಗಾವಿಯ ಗಣೇಶಪುರದಲ್ಲಿ ವಿಂಗ್‌ ಕಮಾಂಡರ್‌ ಹನುಮಂತರಾವ್‌ ಸಾರಥಿ ಅವರ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು/ಪ್ರಜಾವಾಣಿ ಚಿತ್ರ
ಬೆಳಗಾವಿಯ ಗಣೇಶಪುರದಲ್ಲಿ ವಿಂಗ್‌ ಕಮಾಂಡರ್‌ ಹನುಮಂತರಾವ್‌ ಸಾರಥಿ ಅವರ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು/ಪ್ರಜಾವಾಣಿ ಚಿತ್ರ   

ಬೆಳಗಾವಿ: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪ ಯುದ್ಧ ವಿಮಾನಗಳ ಮಧ್ಯೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಪೈಲಟ್, ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ ಅವರ ಅಂತ್ಯಕ್ರಿಯೆ ತಾಲ್ಲೂಕಿನ ಬೆನಕನ ಹಳ್ಳಿಯ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಭಾನುವಾರ ನೆರವೇರಿತು.

ಕುರುಬ ಸಮುದಾಯದ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು. ಹಿರಿಯ ಸಹೋದರ ಪ್ರವೀಣ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ಗಣೇಶಪುರದ ಮುಖ್ಯ ರಸ್ತೆಯಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT