ADVERTISEMENT

ಜೆಡಿಎಸ್‌ನ ಅಶೋಕ್‌ ಪೂಜಾರಿಗೆ ಆಹ್ವಾನ ನೀಡಿದ ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 14:58 IST
Last Updated 16 ಫೆಬ್ರುವರಿ 2021, 14:58 IST
ಗೋಕಾಕದಲ್ಲಿ ಮಂಗಳವಾರ ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಅವರ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಭೇಟಿ ನೀಡಿ ಮಾತುಕತೆ ನಡೆಸಿದರು
ಗೋಕಾಕದಲ್ಲಿ ಮಂಗಳವಾರ ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಅವರ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಭೇಟಿ ನೀಡಿ ಮಾತುಕತೆ ನಡೆಸಿದರು   

ಗೋಕಾಕ: ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಮುಖಂಡ ಆಶೋಕ ಪೂಜಾರಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಇಲ್ಲಿ ಮಂಗಳವಾರ ಆಹ್ವಾನ ನೀಡಿದರು.

ನಗರದ ಅಂಬಿಗೇರ ಗಲ್ಲಿಯಲ್ಲಿರುವ ಪೂಜಾರಿ ಅವರ ನಿವಾಸದಲ್ಲಿ ಮಾತುಕತೆ ನಡೆಸಿದರು. ಮುಂಬರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸತೀಶ, ‘ಪಕ್ಷ ಸಂಘಟನೆ ಜವಾಬ್ದಾರಿ ಕೂಡ ನನ್ನ ಮೇಲಿದೆ. ಹೀಗಾಗಿ ಇಲ್ಲಿನ ಪ್ರಮುಖರಾದ ಅಶೋಕ ಪೂಜಾರಿ, ಕೆಎಲ್‌ಇ ಸಂಸ್ಥೆ ನಿರ್ದೇಶಕ ಜಯಾನಂದ ಮುನವಳ್ಳಿ, ಮಹಾಂತೇಶ ತಾಂವಶಿ ಮೊದಲಾದವರನ್ನು ಪಕ್ಷಕ್ಕೆ ಆಹ್ವಾನಿಸಿದ್ದೇನೆ. ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಅಶೋಕ ಪೂಜಾರಿ ಅವರ ನಿವಾಸಕ್ಕೆ ಭೇಟಿ ಕೊಟ್ಟಿದ್ದೆ. ಅದಕ್ಕೆ ಬೇರಾವ ಅರ್ಥ ಕಲ್ಪಿಸುವ ಅಗತ್ಯವಿಲ್ಲ’ ಎಂದರು.

ADVERTISEMENT

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಸಾಂಸ್ಕೃತಿಕ ಪ್ರಕೋಷ್ಠ ಸಂಚಾಲಕ ಮಹಾಂತೇಶ ತಾಂವಶಿ ಇದ್ದದ್ದು ಅಚ್ಚರಿ ಮೂಡಿಸಿತು. ಮುಖಂಡ ಶಂಕರ ಗಿಡ್ಡಿನವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.