ADVERTISEMENT

ಸತೀಶ ಜಾರಕಿಹೊಳಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ

​ಪ್ರಜಾವಾಣಿ ವಾರ್ತೆ
Published 9 ಜೂನ್ 2023, 14:40 IST
Last Updated 9 ಜೂನ್ 2023, 14:40 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ   

ಬೆಳಗಾವಿ: ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ನಿರೀಕ್ಷೆಯಂತೆ ಲೋಕೋ‍‍ಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ.

ಎರಡು ಬಾರಿ ವಿಧಾನ ಪರಿಷತ್‌ ಸದಸ್ಯ ಮತ್ತು ನಾಲ್ಕು ಬಾರಿ ಶಾಸಕರಾಗಿರುವ ಸತೀಶ, ನಾಲ್ಕನೇ ಬಾರಿ ಸಚಿವರಾಗಿದ್ದಾರೆ. ಆದರೆ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗುತ್ತಿರುವುದು ಮೂರನೇ ಸಲ. ಕಾಂಗ್ರೆಸ್‌– ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಮೊದಲ ಸಲ ಉಸ್ತುವಾರಿ ಸಚಿವರಾದರು. 2013ರ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲೂ ಮತ್ತೊಮ್ಮೆ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದರು.

18 ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಈ ಸಲ 11 ಸ್ಥಾನ ಗೆದ್ದು ಬೀಗಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಸತೀಶ ಅವರಿಗೆ ಆಗಲೇ ಉಸ್ತುವಾರಿ ಸಚಿವ ಸ್ಥಾನ ಖಾತ್ರಿಯಾಗಿತ್ತು. ಈಗ ಘೋಷಣೆಯಾಗಿದೆ. ಇತ್ತೀಚೆಗೆ ಸುವರ್ಣ ವಿಧಾನಸೌಧ ಮತ್ತು ಮಹಾನಗರ ಪಾಲಿಕೆಯಲ್ಲಿ ಸತೀಶ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದರು.

ADVERTISEMENT

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆಯಾಗಿರುವ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಸ್ಥಾನ ಕೊಡಲಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಅವರು ಸತತ ಎರಡನೇ ಬಾರಿ ಆಯ್ಕೆಯಾಗಿ, ಮೊದಲ ಬಾರಿ ಸಚಿವೆಯಾಗಿದ್ದಾರೆ. ಕಾಂಗ್ರೆಸ್‌ನಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳಕರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.