ಸತೀಶ ಜಾರಕಿಹೊಳಿ
ಬೆಳಗಾವಿ: ‘ಖಾಲಿಯಿರುವ ಎರಡು ಸಚಿವ ಸ್ಥಾನಗಳನ್ನು ವಾಲ್ಮೀಕಿ ಸಮಾಜದವರಿಗೆ ನೀಡಲು ಕೋರಿ ವಾಲ್ಮೀಕಿ ಶ್ರೀಗಳ ನೇತೃತ್ವದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
‘ಉಳಿದ ಎರಡೂವರೆ ವರ್ಷ ಯಾರು ಮುಖ್ಯಮಂತ್ರಿ ಎಂಬ ಗೊಂದಲಕ್ಕೆ ತೆರೆ ಬಿದ್ದಿದೆ ಎಂದು ಭಾವಿಸಿದ್ದೇನೆ. ಪಕ್ಷದ ಕೆಲವರಲ್ಲಿನ ಗೊಂದಲವನ್ನು ಹೈಕಮಾಂಡ್ ಸರಿಪಡಿಸಬೇಕು’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಶ್ನಾವಳಿ ಕುರಿತು ಪ್ರತಿಕ್ರಿಯಿಸಿದ ಅವರು, ‘ಹಲವಾರು ಪ್ರಶ್ನೆಗಳಿಗೆ ಉತ್ತರಿಸಲು ಜನರು ಹಿಂಜರಿಯುತ್ತಾರೆ. ಪ್ರಶ್ನೆಗಳನ್ನು ಕಡಿಮೆಗೊಳಿಸಿದರೆ ಒಳ್ಳೆಯದು’ ಎಂದರು.
ಹುಬ್ಬಳ್ಳಿಯಲ್ಲಿ ಮಾತನಾಡಿದವರು, ‘ಕಲ್ಯಾಣ ಕರ್ನಾಟಕದಂತೆ ಕಿತ್ತೂರು ಕರ್ನಾಟಕವು ಹಿಂದುಳಿದಿದೆ. ಈ ಭಾಗದಲ್ಲಿ 36 ಶಾಸಕರಿದ್ದಾರೆ. ಅವರಿಗೆ ನೀಡಿದಂತೆ ನಮಗೂ ಅನುದಾನ ಕೊಟ್ಟರೆ ಅಭಿವೃದ್ಧಿಗೆ ಅನುಕೂಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.